ಉತ್ತರ ಕನ್ನಡ | ದೇವಸ್ಥಾನಗಳ ಪೂಜಾ ಸಾಮಗ್ರಿ ಕಳ್ಳತನದ ಆರೋಪಿ ಬಂಧನ; 174 ಕೆಜಿ ಸಾಮಗ್ರಿ ವಶ

Date:

ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಬಂಧಿತನನ್ನು ಕಾರವಾರದ ಗಿಂಡಿವಾಡ ಮೂಲದ ವಿನಯ ಅಲಿಯಾಸ್ ವಿನಾಯಕ ದಯಾನಂದ ಗಾಂವ್ಕರ್ (40) ಎಂದು ಗುರುತಿಸಲಾಗಿದೆ ಈತನು ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದಾನೆ ಎಂದು ತಿಳಿದುಬಂದಿದೆ. ಒಟ್ಟು 87,000 ರೂ. ಅಂದಾಜು ಮೌಲ್ಯದ 174 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಪೂಜಾ ಸಾಮಗ್ರಿಗಳನ್ನು (ಘಂಟೆ, ದೀಪದ ಕಂಬ, ಆರತಿ ತಟ್ಟೆ ಇತ್ಯಾದಿ) ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಕಳೆದ ಕೆಲವು ದಿನಗಳ ಅಂತರದಲ್ಲಿ ಕಾರವಾರ ತಾಲೂಕಿನಾದ್ಯಂತ ಸುಮಾರು 6-7 ದೇವಸ್ಥಾನಗಳಲ್ಲಿ ಕಳ್ಳತನ ನಡೆದಿತ್ತು. ಆದರೆ, ಹುಂಡಿಯಲ್ಲಿದ್ದ ಹಣದ ಬದಲಾಗಿ ಕೇವಲ ಲೋಹದ ಪೂಜಾ ವಸ್ತುಗಳೇ ಕಳ್ಳತನವಾಗುತ್ತಿದ್ದರಿಂದ ಹಾಗೂ ಅವು ಕಡಿಮೆ ಮೌಲ್ಯದ ವಸ್ತುಗಳಾಗಿದ್ದರಿಂದ ಬಹುತೇಕ ದೇವಾಲಯದ ಆಡಳಿತ ಮಂಡಳಿಗಳು ನಿರ್ಲಕ್ಷ್ಯ ವಹಿಸಿ ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ.

ಆದರೆ, ಮೇ 20 ರಂದು ಕಾರವಾರದ ಹಬ್ಬುವಾಡ ರಸ್ತೆಯಲ್ಲಿರುವ ದಾಸಮಾರುತಿ ದೇವಸ್ಥಾನದಲ್ಲಿ ಸುಮಾರು 50 ಕೆ.ಜಿ ತೂಕದ ಪೂಜಾ ಸಾಮಗ್ರಿಗಳು ಕಳುವಾಗಿದ್ದವು. ಈ ಬಗ್ಗೆ ಗ್ರೀನ್ ಸ್ಟ್ರೀಟ್ ನಿವಾಸಿ ಶಾಮಸುಂದರ ಎಂಬುವವರು ಜೂನ್ 06 ರಂದು ಕಾರವಾರ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ತನಿಖೆ ಚುರುಕುಗೊಳಿಸಿದರು.

ಈ ಸುದ್ದಿ ಓದಿದ್ದೀರಾ ? ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ದೂರು ದಾಖಲಾಗುತ್ತಿದ್ದಂತೆ ಕಾರವಾರ ಉಪವಿಭಾಗದ ಡಿವೈಎಸ್‌ಪಿ ಗಿರೀಶ ವಿ. ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ಖಚಿತ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ತಂಡ, ಆರೋಪಿ ವಿನಾಯಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಆರೋಪಿಯು ಕಾರವಾರ ಶಹರ, ಕಾರವಾರ ಗ್ರಾಮೀಣ ಹಾಗೂ ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ತಾನೇ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ., ಹಾಗೂ ಡಿವೈಎಸ್ಪಿ ಗಿರೀಶ ವಿ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕಾರವಾರ ಶಹರ ಪೊಲೀಸ್ ಠಾಣೆಯ ನಿರೀಕ್ಷಕಿ ಜಯಶ್ರೀ ಮಾನೆ, ಪಿಎಸ್ಐ ಉದ್ದಪ್ಪ ಎ. ಧರೆಪ್ಪನವರ ಮತ್ತು ಸಿಬ್ಬಂದಿಗಳಾದ ಸೂರಜ ಕೊಠಾರಕರ, ಸಚೀನ ನಾಯ್ಕ, ಹಸನ್ ಕುಟ್ಟಿ, ರಾಜೇಶ ನಾಯಕ್, ಮದೇವ ಸಂಗಾಪುರ, ಪ್ರಕಾಶ ದಂಡೆಪ್ಪನವರ, ಪ್ರತಾಪಕುಮಾರ ಎಂ. ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...