ಉತ್ತರ ಕನ್ನಡ | ಕಬ್ಬು ಬೆಳೆಗಾರರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ: ಡಿಸಿ ಲಕ್ಷ್ಮಿಪ್ರಿಯಾ

Date:

ಉತ್ತರ ಕನ್ನಡ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಅವರಿಗೆ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಭರವಸೆ ನೀಡಿದರು.

- Advertisement -

ಹಳಿಯಾಳ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ನಡೆದ 2025–26 ನೇ ಸಾಲಿನ ಕಬ್ಬು ನುರಿಯುವ ಹಂಗಾಮು ಪ್ರಾರಂಭ ಹಾಗೂ ಕಬ್ಬು ಸಂಬಂಧಿತ ವಿಷಯಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಕಬ್ಬು ಬೆಳೆಗಾರರ ಬಹುಕಾಲದ ಬೇಡಿಕೆಯಾದ ಕಾರ್ಖಾನೆಯ ಮುಂಭಾಗದಲ್ಲಿ ಕಬ್ಬು ತೂಕ ಅಳತೆ ಯಂತ್ರ ಅಳವಡಿಸಲು ಕಾರ್ಖಾನೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಬಾರಿಯ ಕಬ್ಬು ನುರಿಯುವ ಹಂಗಾಮು ಆರಂಭಕ್ಕೂ ಮುನ್ನ ಕಾರ್ಖಾನೆ ಮುಂಭಾಗದಲ್ಲೇ ತೂಕಮಾಪಕ ಯಂತ್ರ ಅಳವಡಿಸಲಾಗುವುದು ಎಂದು ಕಾರ್ಖಾನೆ ಅಧಿಕಾರಿಗಳು ಸಭೆಯಲ್ಲಿ ಭರವಸೆ ನೀಡಿದರು.

ಕಬ್ಬು ಕಟಾವಣೆಯಾದ 2023–24 ನೇ ಸಾಲಿನಲ್ಲಿ ರೈತರಿಂದ ಹೆಚ್ಚುವರಿ ವಸೂಲಿ ಮಾಡಲಾದ H & T ದರವನ್ನು ₹256 ರೂಪಾಯಿಗಳು ಮೊತ್ತವನ್ನು ರೈತರಿಗೆ ಮರುಪಾವತಿಸಲು ಕಬ್ಬು ಆಯುಕ್ತರು ಆದೇಶಿಸಿದರೂ, ಕಾರ್ಖಾನೆಯವರು ಇದುವರೆಗೆ ಪಾವತಿಸಿಲ್ಲ ಎಂದು ರೈತ ಮುಖಂಡರು ಸಭೆಯಲ್ಲಿ ದೂರಿದರು. ಈ ಕುರಿತು ಜಿಲ್ಲಾಧಿಕಾರಿಯವರು ಮಾಹಿತಿ ನೀಡುತ್ತಾ, ಒಟ್ಟು ₹26 ಕೋಟಿ ಮೊತ್ತವನ್ನು ರೈತರಿಗೆ ನೀಡುವಂತೆ ಕಬ್ಬು ಆಯುಕ್ತರು ಕಾರ್ಖಾನೆಗೆ ಆದೇಶಿಸಿದ್ದರು.

ಈ ಸುದ್ದಿ ಓದಿದ್ದೀರಾ? ʼದೀಕ್ಷಾ ಬ್ರ್ಯಾಂಡ್ʼ ಮೂಲಕ ಸ್ವಾವಲಂಬನೆ ಬದುಕು; PMFME ಯೋಜನೆಯಿಂದ ಯಶಸ್ಸು ಕಂಡ ಮಹಿಳಾ ಉದ್ಯಮಿ

ಆದರೆ ಕಾರ್ಖಾನೆಯವರು ಅದಕ್ಕೆ ವಿರುದ್ಧವಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಅಲ್ಲಿ ಎರಡು ವಾರಗಳ ತಡೆಯಾಜ್ಞೆ ದೊರೆತಿದೆ. ವಿಷಯವನ್ನು ಧಾರವಾಡದ ನ್ಯಾಯಾಲಯಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕಾರ್ಖಾನೆಯವರು ರೈತರಿಗೆ ಬಾಕಿ ಮೊತ್ತ ಪಾವತಿಸಬೇಕೆಂದು ಕಬ್ಬು ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದರು. ಕಳೆದ ವರ್ಷದಂತೆ ಈ ವರ್ಷವೂ ಕಬ್ಬು ಕಟಾವಿನ ಆದ್ಯತಾ ಪಟ್ಟಿ ಪ್ರಕಟಿಸಿ ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಕಾರ್ಖಾನೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶಿಸಿದರು. ಉಲ್ಲಂಘನೆ ಕಂಡುಬಂದಲ್ಲಿ ರೈತರು ಪೊಲೀಸರಿಗೆ ಅಥವಾ ತಹಶೀಲ್ದಾರರಿಗೆ ಮಾಹಿತಿ ನೀಡಬಹುದು, ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಿಲ್ಲೆಯ ರೈತರ ಹಿತರಕ್ಷಣೆಗೆ ಜಿಲ್ಲಾಡಳಿತ ಸದಾ ಬದ್ಧವಾಗಿದ್ದು, ರೈತರು ಸಹ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ಶ್ರವಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಧಾರವಾಡ ಉಪ ವಿಭಾಗಾಧಿಕಾರಿ ಶಲೇಮ್ ಹುಸೇನ್, ಡಿವೈಎಸ್ಪಿ ಶಿವಾನಂದ ಮದುರಕಂಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ರೈತ ಮುಖಂಡರು ಹಾಗೂ ಕಬ್ಬು ಬೆಳೆಗಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...