ಉತ್ತರ ಕನ್ನಡ | ಅಗಡಿ ಚೆಕ್‌ ಪೋಸ್ಟ್; ದಾಖಲೆ ಇಲ್ಲದ 3.39 ಲಕ್ಷ ರೂ. ವಶ‌

Date:

  • ಅಗಡಿ ಚೆಕ್ ಪೋಸ್ಟ್‌ ಬಳಿ ಚುರುಕಾಗಿರುವ ವಾಹನ ತಪಾಸಣೆ ಕಾರ್ಯ
  • ಅಗಡಿ ಚೆಕ್‌ ಪೋಸ್ಟ್‌ ಬಳಿ ವಾಹನ ತಪಾಸಣೆ ವೇಳೆ ದಾಖಲೆ ರಹಿತ ಹಣ ಪತ್ತೆ

ಅಗಡಿ ಚೆಕ್‌ ಪೋಸ್ಟ್‌ ಬಳಿ ಸೂಕ್ತ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ₹3.39 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟಿಯಲ್ಲಿ ಹಣ ಪತ್ತೆಯಾಗಿರುವುದು ಕಂಡುಬಂದಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆದಿರುವ ಅಗಡಿ ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಪಟ್ಟಣದ ನಿವಾಸಿಯೊಬ್ಬರು ಹುಬ್ಬಳ್ಳಿಯಿಂದ ಕಲಘಟಗಿ ಮಾರ್ಗವಾಗಿ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಚೆಕ್‌ ಪೋಸ್ಟ್‌ನಲ್ಲಿರುವ ಸಿಬ್ಬಂದಿ ಸ್ಕೂಟಿಯನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

ಜಮೀನು ವ್ಯಾಪಾರ ಮಾಡಿರುವ ಹಣ ಎಂದು ಸ್ಕೂಟಿ ಸವಾರ ವಿವರಣೆ ನೀಡಿದರೂ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...