ಉತ್ತರ ಕನ್ನಡ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿ ಕಾರ್ಮಿಕರ ಸಂಘ ಪ್ರತಿಭಟನೆ

Date:

ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಸೇರಿ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

- Advertisement -
  • ಕೃಷಿ ಕೂಲಿಕಾರರಿಗೆ ಪ್ರಸ್ತುತ ದಿನಗೂಲಿ ₹370 ಸಾಕಾಗುತ್ತಿಲ್ಲ. ಕನಿಷ್ಠ ₹600 ದಿನಗೂಲಿಯನ್ನು ನಿಗದಿಪಡಿಸಬೇಕು.
  • ಪ್ರಸ್ತುತ ವರ್ಷದ ಉದ್ಯೋಗದಲ್ಲಿ ಕೇವಲ 100 ಹಾಜರಿಗಳನ್ನು ಮಾತ್ರ ನೀಡಲಾಗುತ್ತಿದೆ. ಇದನ್ನು 200 ಹಾಜರಿಗಳವರೆಗೆ ಹೆಚ್ಚಿಸಬೇಕು.
  • ಮಾಡಿದ ಕೆಲಸಕ್ಕೆ 15 ದಿನಗಳೊಳಗೆ ಕೂಲಿ ಪಾವತಿ ಮಾಡಬೇಕು.
  • ನಗದಿಲ್ಲದೇ ರೈತರಿಗೆ ತಲೆಮಾರು ಪಟ್ಟಿ ವಿತರಣೆ ಮಾಡಬೇಕು.
  • ಅರಣ್ಯ ಹಕ್ಕುಪತ್ರಗಳನ್ನು ಎಲ್ಲ ಅರ್ಹ ಕುಟುಂಬಗಳಿಗೆ ನೀಡಬೇಕು.
  • PWD ಇಲಾಖೆಗೆ ಸಂಬಂಧಪಟ್ಟ ರಸ್ತೆಗಳು ಮಳೆ ಕಾರಣದಿಂದ ಹಾನಿಗೊಳಗಾಗಿವೆ. ಕೂಡಲೇ ದುರಸ್ತಿ ಕಾರ್ಯ ನಡೆಯಬೇಕು.
  • ಮನೆ ಜಾಗದ ದಾಖಲೆಗಳ ಸಮಸ್ಯೆಗಳನ್ನು ಪರಿಹರಿಸಬೇಕು. ದಾಖಲೆ ಇಲ್ಲದವರಿಗೆ ಸೂಕ್ತ ದಾಖಲೆಗಳನ್ನು ಒದಗಿಸೇಕು.
    ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
WhatsApp Image 2025 07 09 at 4.21.12 PM

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆಯಲ್ಲಿ ತಾಲೂಕಾಧ್ಯಕ್ಷ ಭೀಮಣ್ಣ ಬೋವಿ, ಕಾರ್ಯದರ್ಶಿ ಭೂತೇಷ ಚಿತ್ರಗಾರ, ಸಾಯಿನಾಥ್ ಕಲ್ಲಹಕ್ಲ, ಮಾಂತೇಶ ಮಾಳಗಿ, ಶಿವಪ್ಪ ಹರಿಜನ (ಪಾಳಾ), ನೀಲವ್ವ ಸುರೇಶ್ ಬೋವಿ, ಸಾವಿತ್ರೀ ಉಗ್ಗಿನಕೇರಿ, ಸಾವಿತ್ರೀ ಕಲಕೇರಿ, ಗೋಪಾಲ್ ಅಕ್ಕಸಾಲಿ, ಕಲಾವತಿ ಕಲಕೇರಿ ಮತ್ತು ಧರ್ಮಾವತಿ ಮಜ್ಜಿಗೇರಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...