ಉತ್ತರ ಕನ್ನಡ | ನ್ಯಾ.ವರ್ಮ ವಿರುದ್ಧದ ಆರೋಪ: ತನಿಖಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ನೇಮಕ

Date:

ನ್ಯಾ.ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ರಚಿಸಲಾದ ಮೂವರು ಸದಸ್ಯರ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ಅವರನ್ನು ನೇಮಕ ಮಾಡಿದ್ದು, ಸೆಪ್ಟಂಬರ್‌ 5ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

- Advertisement -

ಈ ಸಮಿತಿಯ ಸದಸ್ಯರಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾ.ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾ.ಮನೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ಹಿರಿಯ ವಕೀಲ ಬಿ ವಿ ಆಚಾರ್ಯ ನಿಯುಕ್ತಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

1989ನೇ ಬ್ಯಾಚ್‌(ಆದಾಯ ತೆರಿಗೆ)ನ ಐಆರ್‌ಎಸ್‌ ಅಧಿಕಾರಿಯಾಗಿರುವ ಗಣಪತಿ ಭಟ್‌ ಇತ್ತೀಚೆಗೆ ಬೆಂಗಳೂರು ಕಚೇರಿ ಹೊಂದಿದ್ದ ಕರ್ನಾಟಕ ಮತ್ತು ಗೋವಾ ಪ್ರಾದೇಶಿಕ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಆಯುಕ್ತ ಸ್ಥಾನದಿಂದ ನಿವೃತ್ತರಾಗಿದ್ದರು. ಇದಕ್ಕೂ ಮುನ್ನ ಅವರು ದೆಹಲಿಯಲ್ಲಿ ಅಂತಾರಾಷ್ಟ್ರೀಯ ತೆರಿಗೆ ವಿಭಾಗದ ಪ್ರಧಾನ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಆದಾಯ ತೆರಿಗೆ ಇಲಾಖೆಯ ಮೂರು ದಶಕಗಳಿಗಿಂತ ಹೆಚ್ಚಿನ ವೃತ್ತಿಜೀವನದಲ್ಲಿ ಅವರು ಹಲವಾರು ಪ್ರಮುಖ ಮತ್ತು ಸೂಕ್ಷ್ಮ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಸಂಕೀರ್ಣ ತನಿಖೆಗಳು ಹಾಗೂ ನೀತಿ ವಿಷಯಗಳಲ್ಲಿನ ಪರಿಣತಿಗೆ ಪ್ರಸಿದ್ಧರಾಗಿದ್ದಾರೆ. ಇಲಾಖೆಯಲ್ಲಿ ಕೆಲಸ ಮಾಡುವ ಅವಧಿಯಲ್ಲಿ ಮತ್ತು ಇತ್ತೀಚೆಗೆ ಕರ್ನಾಟಕ–ಗೋವಾ ಮತ್ತು ಕೇರಳದ ಆದಾಯ ತೆರಿಗೆ ತನಿಖಾ ಮಹಾ ನಿರ್ದೇಶಕರಾಗಿದ್ದಾಗ, ಅವರು ಅನೇಕ ರೋಚಕ ಪ್ರಕರಣಗಳಲ್ಲಿ ಆದಾಯ ತೆರಿಗೆ ತನಿಖೆಗಳನ್ನು ನಡೆಸಿ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಕಾರಣರಾಗಿದ್ದರು. ಭಾರತೀಯ ಪ್ರಜೆಗಳು ಹೊಂದಿರುವ ಗಡಿಯಾಚೆಗಿನ ಹಣಕಾಸು ವ್ಯವಹಾರಗಳು, ಸಾಗರೋತ್ತರ ಆಸ್ತಿಗಳು ಮತ್ತು ವಿದೇಶಿ ಬ್ಯಾಂಕ್ ಖಾತೆಗಳ ಕುರಿತು ಮಾಹಿತಿ ಸಂಗ್ರಹಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಗಣಪತಿ ಭಟ್ ಅವರು ಭಾರತ ಸರ್ಕಾರದ ಅನೇಕ ಇಲಾಖೆಗಳಲ್ಲೂ ನಿಯೋಜನೆಯ ಮೇಲೆ ಕಾರ್ಯ ನಿರ್ವಹಿಸಿದ್ದು, ವಿಶೇಷವಾಗಿ ಲೋಕಸಭೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಹಲವಾರು ಸಂಸದೀಯ ಸಮಿತಿಗಳನ್ನು ಅವುಗಳ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದರು. ಅವರು ಅಕಾಡೆಮಿಕ್ ಮತ್ತು ನೀತಿ ಚರ್ಚೆಗಳಿಗೂ ಕೊಡುಗೆ ನೀಡಿದ್ದಾರೆ. Tax Policy and FDI ಎಂಬ ಪುಸ್ತಕದ ಲೇಖಕರಾಗಿರುವ ಅವರು ಪ್ರಸ್ತುತ ಭಾರತೀಯ ಪ್ರಜಾಪ್ರಭುತ್ವದ ಸಂದರ್ಭದಲ್ಲಿ ಅಧಿಕಾರಗಳ ವಿಂಗಡಣೆ ಕುರಿತಂತೆ ಸಂಶೋಧನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಹಮದ್ ಪೈಗಂಬರ್‌ ಜನ್ಮದಿನ: ಡಿವೈಎಫ್‌ಐನಿಂದ ಸಿಹಿ ಹಂಚಿಕೆ

ಉತ್ತರ ಕನ್ನಡ ಜಿಲ್ಲೆಯ ಬಿದ್ರೆಪಾಲ ಗ್ರಾಮದಲ್ಲಿ ಜನಿಸಿದ ಗಣಪತಿ ಭಟ್, ಧಾರವಾಡದಲ್ಲಿ ಬಿಎ, ಪುಣೆಯಲ್ಲಿ ಎಂಎ ವ್ಯಾಸಂಗ ಮುಗಿಸಿದ್ದು, 2010ರಲ್ಲಿ ಆರ್ಥಿಕಶಾಸ್ತ್ರದಲ್ಲಿ ಪಿಎಚ್‌ಡಿ ಪೂರೈಸಿದ್ದಾರೆ. ಅಲ್ಲದೆ, ದೆಹಲಿ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿಯನ್ನೂ ಪಡೆದಿದ್ದಾರೆ.

ಸಮೃದ್ಧ ವೃತ್ತಿಪರ ಅನುಭವ, ಶೈಕ್ಷಣಿಕ ಕೊಡುಗೆಗಳು ಮತ್ತು ಸೂಕ್ಷ್ಮತೆಗಳಿಂದಾಗಿ, ಆಡಳಿತ, ನೀತಿ ಮತ್ತು ಸಾರ್ವಜನಿಕ ವ್ಯವಹಾರಗಳ ವಿಷಯದಲ್ಲಿ ಗಣಪತಿ ಭಟ್ ಅವರನ್ನು ಮುಖ್ಯ ಧ್ವನಿಯಾಗಿ ಪರಿಗಣಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡ ರಕ್ಷಣಾ ವೇದಿಕೆಗೆ ಪ್ರವೀಣ ಪರ್ಕಳ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ...

ಗದಗ ತಾಲೂಕನ್ನು ಬರಪೀಡಿತ ಸೇರ್ಪಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಎಚ್.ಕೆ ಪಾಟೀಲ್ ಎಚ್ಚರಿಕೆ

ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ, ಶಾಸಕ ಸ್ಥಾನಕ್ಕೆ...