ಉತ್ತರ ಕನ್ನಡ | ಅನಂತ ಕುಮಾರ್ ಹೆಗಡೆಯನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ: ಶ್ಯಾಮರಾಜ್ ಬಿರ್ತಿ

Date:

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೊದಲೊಮ್ಮೆ ನಾವು ಬಂದಿರುವುದೇ ಸಂವಿಧಾನ ಬದಲಾವಣೆ ಮಾಡುದಕ್ಕೆ ಎಂದು ಹೇಳಿಕೆ ನೀಡಿದ್ದರು. ಈಗ ಮತ್ತೇ ನಮಗೆ 400 ಸಂಸದರನ್ನು ಕೊಡಿ ನಾವು ಸಂವಿಧಾನವನ್ನೇ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಸಂವಿಧಾನದಡಿ ಗೆದ್ದು ಪ್ರಮಾಣ ವಚನ ಸ್ವೀಕರಸಿ ಈಗ ಸಂವಿಧಾನವನ್ನೇ ಬದಲಾಯಿಸುತ್ತೇವೆ, ತಿದ್ದುಪಡಿ ಮಾಡುತ್ತೇವೆ ಎಂದು ಪದೇ ಪದೆ ಬಹಿರಂಗ ಹೇಳಿ ನೀಡಿರುವುದು ದೇಶದ ಅಖಂಡತೆಗೆ ಭಂಗ ತರುವ ಮತ್ತು ಪ್ರಜಾಪ್ರಭುತ್ವ ವಿರೋಧಿ, ದೇಶಧ್ರೋಹದ ಕ್ರತ್ಯವಾಗಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಪತ್ರಿಕಾ ರಂಗವನ್ನು ನಾಯಿಗಳಿಗೆ ಹೋಲಿಸಿರುವುದು ಖಂಡನೀಯ ಎಂದರು. ಬಾಬಾಸಾಹೇಬರು ರಚಿಸಿದ ಸಂವಿಧಾನ ಬಗ್ಗೆ ಕೇವಲವಾಗಿ ಮಾತನಾಡಿದರೆ, ಈ ದೇಶದ ಮೂಲನಿವಾಸಿಗಳಾದ ನಾವು ಸರಿಯಾದ ಮತ್ತು ಮುಟ್ಟಿನೋಡಿಕೊಳ್ಳುವಂತಹ ಪ್ರತಿಕ್ರಿಯೆ ಕೊಡಬೇಕಾಗುತ್ತದೆ ಎಂದು ಖಾರವಾಗಿ ನುಡಿದರು.

ಹೆಗಡೆಯವರೇ ಈ ದೇಶವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾಧಿಸಿಕೊಂಡು ಬಂದ ದೇಶ. ಬಹುತ್ವವನ್ನು ಕಾಪಾಡಿಕೊಂಡು ಬಂದ ದೇಶ. ನಾಲಗೆ ಚಪಲಕ್ಕೆ ಬಾಯಿಗೆ ಬಂದಹಾಗೆ ಸಂವಿಧಾನ ವಿರೋಧಿ ಹೇಳಿಕೆ ನೀಡಿದರೆ ತಕ್ಕ ಉತ್ತರ ಕೊಡಬೇಕಾದಿತು ಎಂದು ಶ್ಯಾಮರಾಜ್ ಬಿರ್ತಿ ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...