ಉತ್ತರ ಕನ್ನಡ | ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ

Date:

Advertisements

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ 5 ಲಕ್ಷ ನಗದನ್ನು ಒಳಗೊಂಡ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮ ಗಾಂಧೀಜಿಯವರ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸು ಕೂಡ ಮಾಡಬಹುದಾಗಿದೆ.

IMG 20250830 WA0039

ಅರ್ಜಿಗಳನ್ನು ಸೆ. 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ [email protected] ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಅಂತರ ಜಿಲ್ಲಾ ಬೈಕ್‌ ಕಳ್ಳರ ಬಂಧನ; 6 ಬೈಕ್ ವಶ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

Download Eedina App Android / iOS

X