ಹೊನ್ನಾವರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗಾಗಿ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತಿಯುಳ್ಳ ವಕೀಲರು ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 26/08/2025 ರೊಳಗಾಗಿ ಜಿಲ್ಲಾಧಿಕಾರಿಗಳು ಕಾರವಾರ ರವರ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯ ಜೊತೆ ವಕೀಲ ವೃತ್ತಿ ಕೈಗೊಳ್ಳುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರ ನೀಡಿದ ಸನ್ನದು ದೃಢೀಕೃತ ಪ್ರತಿ, ವಿಳಾಸ ದೃಢೀಕರಿಸುವ ಬಗ್ಗೆ ದೃಢೀಕೃತ ಆಧಾರ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸಬೇಕು ಹಾಗೂ ಅವಧಿ ಮುಕ್ತಾಯವಾದ ತರುವಾಯ ಸ್ವೀಕೃತವಾಗುವ ಅರ್ಜಿಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.