ಉತ್ತರ ಕನ್ನಡ | ವಸತಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಜಿಲ್ಲೆಯ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಮಹಾತ್ಮ ಬಾ ಪುಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳ ಬೋಧಕ ಹುದ್ದೆಗಳು ಖಾಲಿ ಇದ್ದು, ಜೂನ್ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇಂದಿರಾ ಗಾಂಧಿ ವಸತಿ ಶಾಲೆಗಳಾದ ಸಾಂಬ್ರಾಣಿ, ಪಾಳಾ, ಮದನಕಲ್, ಮಂಕಿ, ಬೆಳಸೆ ಸೇರಿದಂತೆ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮದನಹಳ್ಳಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಾದ ಮುರ್ಕವಾಡ, ಹುಲೇಕಲ್, ಅಳ್ಳಂಕಿ, ಕೂಜಳ್ಳಿ, ಬಾಡ, ಕಿನ್ನರ, ಬಾಸಗೋಡ,

ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುಖ್ಯಮಂತ್ರಿ ಆಯ್ಕೆ: ಹೈಕಮಾಂಡ್ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧ – ಸಚಿವ ಮಂಕಾಳ ವೈದ್ಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಾದ ಬಾಣಸಗೇರಿ, ಜೋಯಿಡಾ, ಉದ್ಯಮನಗರ, ಶೇಡಬೇರಿ, ಹೆಗಡೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಾದ ರಾಮನಗರ, ಕಾವಂಚೂರು, ಶೇಡಬೇರಿ, ಗಂಗೆಕೊಳ್ಳ, ಮಹಾತ್ಮ ಬಾ ಪುಲೆ ವಸತಿ ಶಾಲೆ ಕುಂಬಾರವಾಡ,

ಮೊರಾರ್ಜಿ ದೇಸಾಯಿ ಉನ್ನತೀಕರಣ ವಸತಿ ಶಾಲೆಗಳಾದ ಕರಗಿನಕೊಪ್ಪ, ಕಲ್ಲಿ, ಕಿತ್ತೂರು ರಾಣಿ ಚೆನ್ನಮ್ಮ ಉನ್ನತೀಕರಣ ವಸತಿ ಶಾಲೆ ಬೆಳಸೆ ಹಾಗೂ ನಾರಾಯಣ ಗುರು ವಸತಿ ಶಾಲೆ ಜಾಲಿಯಲ್ಲಿ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಪದವಿ, ಬಿ.ಇಡಿ ಪದವಿ ಪಡೆದಿರಬೇಕು ಹಾಗೂ ಟಿ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುವ ಸಾಮರ್ಥ್ಯ ಹೊಂದಿರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಯ್ಕೆಯಾಗುವ ಅತಿಥಿ ಶಿಕ್ಷಕರಿಗೆ ಮಾಸಿಕ ರೂ.16,650 ಗೌರವಧನ ನೀಡಲಾಗುವುದು. ವಸತಿ ಶಾಲೆಗಳಾಗಿರುವುದರಿಂದ ಎಸ್.ಟಿ.ಐ ಕರ್ತವ್ಯ ನಿರ್ವಹಿಸಲು ಸಿದ್ಧರಾಗಿರಬೇಕೆಂದು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9480420400 ಹಾಗೂ 8277894262 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಜಿಲ್ಲಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...