ಉತ್ತರ ಕನ್ನಡ | ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

ಗ್ರಾಮೀಣ ಜನತೆ, ಅಶಕ್ತರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಸುಲಭವಾಗಿ ಕಾನೂನು ಸೇವೆ ಹಾಗೂ ನೆರವು ಒದಗಿಸಲು ಕಾರವಾರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ ಎಂ ತಿಳಿಸಿದ್ದಾರೆ.

- Advertisement -

ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಪಂಚಾಯತ್ ಸದಸ್ಯರು, ಸರ್ಕಾರದ ವಿವಿಧ ಇಲಾಖೆಯಿಂದ ನಿವೃತ್ತರಾದ ನೌಕರರು, ಹಿರಿಯ ನಾಗರಿಕರು, ಕಾನೂನು ಸೇವೆಗಳಲ್ಲಿ ತೊಡಗಿರುವ ಸಮಾಜ ಸೇವಕರು, ಮಹಿಳೆಯರು, ಟ್ರಾನ್ಸ್‌ಜೆಂಡರ್‌ಗಳು, ಪಂಗಡ ಸಮುದಾಯದವರು, ಅಲ್ಪಸಂಖ್ಯಾತರು, ಗೌರವಾನ್ವಿತ ವ್ಯಕ್ತಿಗಳು, ಎಂ.ಎಸ್‌.ಡಬ್ಲ್ಯೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು ಅಥವಾ ಚಿಕಿತ್ಸಕರು, ವಿದ್ಯಾರ್ಥಿಗಳು ಮತ್ತು ಕಾನೂನು ವಿದ್ಯಾರ್ಥಿಗಳು (ವಕೀಲರಾಗಿ ನೋಂದಣಿ ಹೊಂದುವವರೆಗೆ), ರಾಜಕೀಯೇತರ ಸೇವಾ ಮನೋಭಾವ ಹೊಂದಿರುವ ಎನ್‌ಜಿಒ ಹಾಗೂ ಕ್ಲಬ್ ಸದಸ್ಯರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಮೈತ್ರಿ ಸಂಘಗಳು, ಉತ್ತಮ ವರ್ತನೆ ಹೊಂದಿರುವ ದೀರ್ಘಾವಧಿ ಶಿಕ್ಷೆ ಅನುಭವಿಸುತ್ತಿರುವ ಶಿಕ್ಷಣ ಪಡೆದ ಕೈದಿಗಳು, ಮೃತ ರಕ್ಷಣಾ ಸಿಬ್ಬಂದಿಯ ವಿಧವೆಯರು, ಮಾಜಿ ಸೈನಿಕರು ಅಥವಾ ಅವರ ಅವಲಂಬಿತರು, ಪ್ರಸ್ತುತ ಸೇವೆಯಲ್ಲಿರುವ ರಕ್ಷಣಾ ಸಿಬ್ಬಂದಿಯ ಪತ್ನಿ ಅಥವಾ ವಯಸ್ಕ ಮಕ್ಕಳು (ಕನಿಷ್ಠ 10ನೇ ತರಗತಿವರೆಗೂ ವ್ಯಾಸಂಗ ಮಾಡಿರುವವರು) ಸೇರಿದಂತೆ ಸುಮಾರು 50 ರಿಂದ 100 ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನೂ ಓದಿ: ಉತ್ತರ ಕನ್ನಡ | ಭೂಮಿಗಾಗಿ ದಶಕಗಳ ಹೋರಾಟ; ಸೂರಿನ ನಿರೀಕ್ಷೆಯಲ್ಲಿ ಅರಣ್ಯ ವಾಸಿಗಳು

ಆಯ್ಕೆಯಾದ ಸ್ವಯಂ ಸೇವಕರಿಗೆ ಅಗತ್ಯ ತರಬೇತಿ ಮತ್ತು ಗುರುತಿನ ಚೀಟಿ ನೀಡಲಾಗುತ್ತದೆ. ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಟುವಟಿಕೆಗಳಲ್ಲಿ ಬೆಳಗ್ಗೆಯಿಂದ ಸಂಜೆತನಕ ಪಾಲ್ಗೊಂಡಲ್ಲಿ ರೂ.750 ಹಾಗೂ ಅರ್ಧ ದಿನ ಕಾರ್ಯನಿರ್ವಹಿಸಿದಲ್ಲಿ ರೂ.375 ಗೌರವಧನ ನೀಡಲಾಗುವುದು. ಜೊತೆಗೆ ಸಾರ್ವಜನಿಕ ಸಮಸ್ಯೆಗಳ ಬಗೆಹರಿಸುವ ಸಂಬಂಧ ಅವರಿಗೆ ತಗುಲುವ ಮೂಲ ಪ್ರಯಾಣ ವೆಚ್ಚವನ್ನು ಸಹ ನೀಡಲಾಗುತ್ತದೆ.

ಆಸಕ್ತರು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ, ಕಾರವಾರ ಇವರಿಗೆ ಅಕ್ಟೋಬರ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08382-222990 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...