ಉತ್ತರ ಕನ್ನಡ | ಟಿಪ್ಪರ್‌ ಹರಿಸಿ ಸ್ನೇಹಿತನ ಕೊಲೆ ಯತ್ನ; ಆಟೋ ಚಾಲಕ ಸಾವು

Date:

Advertisements

ಇಬ್ಬರು ಯುವಕರ ನಡುವಿನ ಜಗಳದ ದ್ವೇಷಕ್ಕೆ ತಿರುಗಿ ಕೊಲೆ ಮಾಡುವ ಹಂತವನ್ನು ತಲುಪಿದ್ದು, ಇದರಲ್ಲಿ ಅಮಾಯಕ ಆಟೋ ಚಾಲಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರೆಯಂಗಡಿ ಬಳಿ ನಡೆದಿದೆ.

ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಲ್ಲಲೆಂದು ಆತ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಟಿಪ್ಪರ್‌ ಹರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸ್ನೇಹಿತನ ಬದಲಾಗಿ ಆಟೋ ಚಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ವಿನಾಯಕ ಭಟ್‌ ಎಂಬಾತನಿಗೂ ಕೇಶವ ನಾಯ್ಕ ಮತ್ತು ವಸಂತ ನಾಯ್ಕ ಎಂಬವರಿಗೂ ಹಣಕಾಸಿನ ವಿಚಾರಕ್ಕೆ ಜಗಳ ಉಂಟಾಗಿತ್ತು. ಹೀಗಾಗಿ ಇಬ್ಬರ ಮಧ್ಯೆ ದ್ವೇಷ ಬೆಳೆದಿತ್ತು. ಮಂಗಳವಾರ ರಾತ್ರಿ ಕೇಶವ ಮತ್ತು ವಸಂತ ಅವರು ಆಟೋ ಒಂದರ ಬಳಿ ನಿಂತಿದ್ದರು. ಆಗ ಅವರನ್ನು ಕಂಡವನೇ ವಿನಾಯಕ ತಾನು ಚಲಾಯಿಸುತ್ತಿದ್ದ ಟಿಪ್ಪರನ್ನು ಅವರ ಮೇಲೆ ಹಾಯಿಸಿದ್ದ. ಆದರೆ, ಅಲ್ಲಿ ಕೇಶವ ಮತ್ತು ವಸಂತನ ಜತೆಗೆ ಆಟೋ ಚಾಲಕ ಓಲ್ವಿನ್‌ ಕೂಡಾ ನಿಂತಿದ್ದರು. ವಿನಾಯಕ ಭಟ್‌ ಹಾಯಿಸಿದ ಟಿಪ್ಪರ್‌ ಆಲ್ವಿನ್‌, ಕೇಶವ ನಾಯ್ಕ್‌ ಮತ್ತು ವಸಂತ ನಾಯ್ಕ್‌ಗೆ ಅಪ್ಪಳಿಸಿದೆ. ಈ ವೇಳೆ ಓಲ್ವಿನ್‌ ಅವರಿಗೆ ಅದು ಸರಿಯಾಗಿ ಗುದ್ದಿದ್ದು, ತಲೆಗೆ ಗಂಭೀರವಾಗಿ ಗಾಯವಾಗಿದೆ. ಮೂವರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರಲ್ಲಿ ಓಲ್ವಿನ್‌ ಮೃತಪಟ್ಟಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಸಿಟ್ಟಿನ ಭರದಲ್ಲಿ ಅಮಾಯಕನನ್ನು ಬಲಿ ಪಡೆದ ಆರೋಪಿ ವಿನಾಯಕ ಭಟ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X