ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

Date:

Advertisements

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ಮಾತನಾಡಿ, “ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ರಾಜ್ಯಾದ್ಯಂತ ಯುವ ಜನತೆಯಲ್ಲಿ ಅರಿವು ಮೂಡಿಸಲು “Say yes to life, Say no to Drug” ಎಂಬ ಘೋಷ್ಯವಾಕ್ಯದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದು, ಪೊಲೀಸ್ ಇಲಾಖೆಯಿಂದ ಮಾತ್ರ ಡ್ರಗ್ಸ್ ನಿಯಂತ್ರಿಸಲು ಸಾಧ್ಯವಿಲ್ಲ. ಈ ಕಾರ್ಯದಲ್ಲಿ ಪ್ರತಿಯೊಬ್ಬರು ಕೈಜೋಡಿಸಿ ಡ್ರಗ್ಸ್ ಮುಕ್ತ ರಾಜ್ಯಾವನ್ನಾಗಿಸಬೇಕು ಎಂದರು.

ಕ್ರಿಮ್ಸ್ ಆಸ್ಪತ್ರೆ ಮನೋರೊಗ ವಿಭಾಗದ ಪ್ರಾಧ್ಯಪಕ ಹಾಗೂ ಮುಖ್ಯಸ್ಥ ಡಾ. ವಿಜಯರಾಜ್ ಮಾತನಾಡಿ, ಮಾದಕ ವಸ್ತುಗಳ ಸುಲಭವಾಗಿ ದೊರೆಯುದರಿಂದ “ಹುಚ್ಚು ಖೋಡಿ ಮನಸ್ಸು ಹದಿನಾರರ ವಯಸ್ಸು” ಎನ್ನುವಂತೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗುತ್ತಾರೆ. ಒಂದು ಬಾರಿ ಮಾದಕ ವಸ್ತುಗಳನ್ನು ವ್ಯಸನವಾಗಿಸಿಕೊಂಡರೆ ಅದರಿಂದ ಹೊರ ಬರಲು ಸಾಧ್ಯವಾಗುವುದಿಲ್ಲ. ಇದರಿಂದ ಮಾನಸಿಕ ಮತ್ತು ದೈಹಿಕ ತೊಂದರೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವಸ್ತುವಿನಂತೆ ಸೋಶಿಯಲ್ ಮೀಡಿಯಾಗು ಮಾರು ಹೋಗಬಾರದು. ಇದರಿಂದ
ಅಮೂಲ್ಯವಾದ ಜೀವನ ಮತ್ತು ಗುರಿ ಮುಟ್ಟಲು ಸಾಧ್ಯವಿಲ್ಲ ಎಂದರು.

Advertisements
WhatsApp Image 2025 06 27 at 12.44.56 PM

ಮಹಾನಟಿ ರನ್ನರ್ ಅಪ್ ಪ್ರಶಸ್ತಿ ವಿಜೇತೆ ಹಾಗೂ ನಟಿ ಶ್ವೇತಾ ಭಟ್ ಮಾದಕ ವಸ್ತು ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ದು ಅದನ್ನು ನಿಯಂತ್ರಿಸಲು ಮತ್ತು ಡ್ರಗ್ಸ್ ಮುಕ್ತಾ ದೇಶವನ್ನಾಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು, ಯಾರೂ ಕೂಡ ಪ್ಯಾಶನ್, ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳ ಸೇವನೆ ಮಾಡಬಾರದು ಮಾಡುವವರಿಗೆ ಪ್ರೋತ್ಸಾಹ ಸಹ ನೀಡದೆ ಇದರಿಂದ ಆಗುವ ದುಷ್ಪರಿಣಾಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮಾಧಕ ವಸ್ತುಗಳ ಜಾಗೃತಿ ಕುರಿತು ವಿವಿಧ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಾ ಜಗದೀಶ್ ಎಮ್, ಕೃಷ್ಣಮೂರ್ತಿ, ಕ್ರಿಮ್ಸ್ನ ನ್ಯಾಯಾ ವೈದ್ಯ ಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಪಕಿ ಡಾ. ಮಹಾಲಕ್ಷಿ ಎಂ ಬಿ.ಕೆ, ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಎನ್‌ಕಾರ್ಡ ಕಮಿಟಿಯ ಸದಸ್ಯರು ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಶಿವಾಜಿ ಹೈಸ್ಕೂಲ್ ನಿಂದ ಪೊಲೀಸ್ ಕಲ್ಯಾಣ ಮಂಟಪ ಹಾಗೂ ಕಾರವಾರ ಬಸ್ ನಿಲ್ದಾಣದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ರ‍್ಯಾಲಿ ನಡೆಯಿತು.

WhatsApp Image 2025 06 27 at 12.44.55 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X