ಉತ್ತರ ಕನ್ನಡ | ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ LPG ಸಿಲಿಂಡರ್ ಬಳಕೆ ನಿಷೇಧ: ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ

Date:

ಉತ್ತರ ಕನ್ನಡ: ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್, ಬೇಕರಿ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳನ್ನು ಬಳಸಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದೆ.

- Advertisement -

ವಾಣಿಜ್ಯ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಅಧಿಕೃತ ಅನಿಲ ಏಜೆನ್ಸಿಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಖರೀದಿಸಿ, ಅದರ ಅಧಿಕೃತ ಬಿಲ್‌ಗಳನ್ನು ಪಡೆದು ಸಂರಕ್ಷಿಸಿ ಇಟ್ಟುಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸುವ ಸಂದರ್ಭದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು ಅಥವಾ ವಾಣಿಜ್ಯ ಸಿಲಿಂಡರ್ ಖರೀದಿಯ ಅಧಿಕೃತ ದಾಖಲೆ (ಬಿಲ್) ಇಲ್ಲದಿರುವುದು ಕಂಡುಬಂದರೆ, ಎಲ್‌ಪಿಜಿ ಸರಬರಾಜು ಮತ್ತು ವಿತರಣೆ ನಿಯಂತ್ರಣ ಆದೇಶ–2000ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಅಲ್ಲದೆ, ನಿಯಮ ಉಲ್ಲಂಘನೆ ಮಾಡಿದ ವ್ಯಾಪಾರ ಸಂಸ್ಥೆಗಳ ವಿರುದ್ಧ ಸಂಬಂಧಿಸಿದ ಇಲಾಖೆಗಳಿಗೂ ಮಾಹಿತಿ ನೀಡಲಾಗುವುದು. ಪರಿಣಾಮವಾಗಿ ವಾಣಿಜ್ಯ ತೆರಿಗೆ ಇಲಾಖೆ, ಕಾರ್ಮಿಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಂದ ನೀಡಲಾಗುವ ವಾಣಿಜ್ಯ ಪರವಾನಗಿ (ಲೈಸೆನ್ಸ್)ಗಳ ನವೀಕರಣಕ್ಕೂ ಶಿಫಾರಸು ಮಾಡದಂತೆ ಪತ್ರ ಬರೆಯಲಾಗುವುದು ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

ಸುರಕ್ಷತೆ, ಗ್ರಾಹಕರ ಹಿತಾಸಕ್ತಿ ಹಾಗೂ ಸರ್ಕಾರದ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಣಿಜ್ಯ ಸಂಸ್ಥೆಗಳು ನಿಯಮಗಳನ್ನು ಪಾಲಿಸಿ ಅಧಿಕೃತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನೇ ಬಳಸುವಂತೆ ಇಲಾಖೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರ ಅಥವಾ ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...