ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾ ಸೌಧ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗೌತಮ್ (17) ಮೃತ ಪ್ರವಾಸಿ ವಿದ್ಯಾರ್ಥಿ. ಇನ್ನೋರ್ವ ವಿದ್ಯಾರ್ಥಿ ಧನುಶ್ ಎಂಬಾತನನ್ನು ಸ್ಥಳೀಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥವಾದ ಧನುಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿದ್ದೀರಾ? ಸ್ವೀಕಾರಕ್ಕೆ ಆರ್‌ಬಿಐ ನಿರಾಕರಣೆ: ಕೋಟ್ಯಂತರ ಮೌಲ್ಯದ ಹಳೇ ನೋಟು ಸುಡಲು ಮುಂದಾದ ಬೆಂಗಳೂರು ಪೊಲೀಸರು
ಬೆಂಗಳೂರಿನಿಂದ ಒಟ್ಟು 220 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
