ಉತ್ತರ ಕನ್ನಡ | ಎಸ್ಪಿ ಭೇಟಿಯಾದ ಭೀಮಘರ್ಜನೆ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ; ದಲಿತರ ಸಮಸ್ಯೆಗಳ ಬಗ್ಗೆ ಚರ್ಚೆ

Date:

ಉತ್ತರ ಕನ್ನಡ: ಜಿಲ್ಲೆಯ ದಲಿತ ಸಮುದಾಯದ ವಿವಿಧ ಕುಂದುಕೊರತೆಗಳು ಹಾಗೂ ಶಿರಸಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್ ಎಂ ಎನ್ ಅವರನ್ನು ಭೇಟಿ ಮಾಡಿದರು.

- Advertisement -

ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರ ನೇತೃತ್ವದ ನಿಯೋಗವು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಕುಂದುಕೊರತೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಶಿರಸಿಯಲ್ಲಿ ರಾಷ್ಟ್ರೀಯ ಪಕ್ಷವೊಂದು ನಡೆಸಿದ ಎನ್ನಲಾದ ಹೀನ ಕೃತ್ಯದ ಬಗ್ಗೆಯೂ ಎಸ್ಪಿಯವರ ಗಮನ ಸೆಳೆದ ಅರ್ಜುನ್ ಮಿಂಟಿ ಅವರು, ಈ ಘಟನೆಯು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ಶಿರಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ ಭೀಮ ಘರ್ಜನೆ ಸಂಘಟನೆಯು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿತು. ಸಂಘಟನೆಯ ಮನವಿಗೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ದಲಿತ ಸಮುದಾಯದ ರಕ್ಷಣೆ ಮತ್ತು ಕುಂದುಕೊರತೆಗಳ ನಿವಾರಣೆಗೆ ಇಲಾಖೆ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಶಿರಸಿಯಲ್ಲಿ ನಡೆದ ಘಟನೆಯ ಬಗ್ಗೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಕುರಿತು ಸಂಪೂರ್ಣ ವಿಚಾರಣೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...