ಉತ್ತರ ಕನ್ನಡ | ಬಿಜೆಪಿ ಆರೋಪ ರಾಜಕೀಯ ಪ್ರೇರಿತ; ಅಕ್ರಮ ವಲಸಿಗರ ಮಾಹಿತಿ ಇದ್ದರೆ ತನಿಖೆ ನಡೆಸಲಿ: ಪ್ರಸನ್ನ ನಾಯ್ಕ್

Date:

ಉತ್ತರ ಕನ್ನಡ: ಮಾಜಿ ಶಾಸಕಿ ರೂಪಾಲಿ ನಾಯ್ಕ್ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ಆರೋಪಗಳು ಮತ್ತು ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಪ್ರಸನ್ನ ನಾಯ್ಕ್ ಹೇಳಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಿಆರ್‌ಸಿ (PRC) ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದು, ನಾಗರಿಕತ್ವ ನೀಡುವುದು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ರಾಜ್ಯ ಸರ್ಕಾರವು ಕೇವಲ ಸ್ಥಳೀಯ ನಿವಾಸಿ ಪ್ರಮಾಣಪತ್ರವನ್ನು ಮಾತ್ರ ನೀಡುತ್ತಿದ್ದು, ಯಾರಿಗೂ ಹೊಸದಾಗಿ ನಾಗರಿಕತ್ವ ನೀಡುತ್ತಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...


ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಪೂರಕವಾಗಿ ಅರ್ಹ ಸ್ಥಳೀಯ ನಿವಾಸಿಗಳನ್ನು ಗುರುತಿಸಲು ಈ ಪ್ರಮಾಣಪತ್ರವನ್ನು ಬಳಸಲಾಗುತ್ತಿದೆ. ಕೇಂದ್ರ ಸರ್ಕಾರ ನೀಡಿರುವ ಆಧಾರ್ ಕಾರ್ಡ್ ಸೇರಿದಂತೆ ಚುನಾವಣಾ ಆಯೋಗ ಮಾನ್ಯಗೊಳಿಸಿರುವ 11 ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತದೆ. ದಾಖಲೆಗಳು ನಕಲಿಯಾಗಿದ್ದರೆ ಅದರ ಹೊಣೆ ಕೇಂದ್ರದ ವ್ಯವಸ್ಥೆಯ ಮೇಲಿದೆ ಎಂದು ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಂತೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅರಿವು ಅಭಿಯಾನ; ಜುಲೈ 29ರೊಳಗೆ ಗಣತಿ ನಮೂನೆ ಸಲ್ಲಿಸಲು ಕರೆ


ಅಕ್ರಮ ಬಾಂಗ್ಲಾದೇಶಿ ವಲಸಿಗರು ದೇಶದೊಳಗೆ ಪ್ರವೇಶಿಸಿದ್ದಾರೆ ಎಂಬುದಾದರೆ, ರಾಷ್ಟ್ರೀಯ ಭದ್ರತೆ ಹಾಗೂ ಗಡಿ ರಕ್ಷಣೆಯ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಎಸ್‌ಎಫ್ ವೈಫಲ್ಯವೇ ಇದಕ್ಕೆ ಕಾರಣ ಎಂದು ಪ್ರಸನ್ನ ನಾಯ್ಕ್ ಟೀಕಿಸಿದರು.
ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರನ್ನು ಹೊರಹಾಕಲಾಗುತ್ತಿದೆ ಎಂದು ಬಿಜೆಪಿ ಹೇಳುತ್ತಿದ್ದರೆ, ಅವರನ್ನು ದೇಶದ ಗಡಿ ದಾಟಿಸುವ ಬದಲು ಕರ್ನಾಟಕಕ್ಕೆ ಹೇಗೆ ಬರಲು ಅವಕಾಶ ಸಿಕ್ಕಿತು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.


ಅಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದಲ್ಲಿದ್ದಾರೆ ಎಂಬ ಮಾಹಿತಿ ರೂಪಾಲಿ ನಾಯ್ಕ್ ಅವರ ಬಳಿ ಇದ್ದರೆ, ಈವರೆಗೆ ಪೊಲೀಸ್ ಇಲಾಖೆಗೆ ದೂರು ನೀಡದಿರುವುದು ಏಕೆ? ಇದು ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ರೂಪಾಲಿ ನಾಯ್ಕ್ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ತಂದೆ ಹತ್ಯೆ, ತಾಯಿ ಜೈಲು ಪಾಲು; ಅನಾಥರಾದ ಮಕ್ಕಳ ನೆರವಿಗೆ ಧಾವಿಸಿದ ಶಾಸಕ ಭೀಮಣ್ಣ ನಾಯ್ಕ್


ಜಾತಿ ಗಣತಿ ಹಾಗೂ ಸಾಮಾಜಿಕ ನ್ಯಾಯದ ವಿಚಾರದಲ್ಲಿ ಬಿಜೆಪಿ ಆರಂಭದಿಂದಲೂ ವಿರೋಧದ ನಿಲುವು ಹೊಂದಿದ್ದು, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳು ಮತ್ತು ದಮನಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದೆ. ಜಾತಿ ಗಣತಿ ವರದಿಯನ್ನು ಕಾನೂನುಬದ್ಧ ಹಾಗೂ ವೈಜ್ಞಾನಿಕವಾಗಿ ಪರಿಶೀಲಿಸಿ ಎಲ್ಲ ಸಮುದಾಯಗಳಿಗೆ ನ್ಯಾಯ ಸಿಗುವ ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.


ಬಿಜೆಪಿ ನಾಯಕರ ಬಳಿ ಅಕ್ರಮ ವಲಸಿಗರ ಕುರಿತು ಮಾಹಿತಿ ಇದ್ದೂ ಯಾವುದೇ ದೂರು ನೀಡದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಸನ್ನ ನಾಯ್ಕ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...