ಉತ್ತರ ಕನ್ನಡ | ಮೀಟರ್ ಬಡ್ಡಿ ದಂಧೆಗೆ ಬ್ರೇಕ್: ಕಿಂಗ್‌ಪಿನ್ ಜಮೀರ್ ಅಹ್ಮದ್ ಕೊಲೆ ಬಳಿಕ ಖಾಕಿ ಕಾರ್ಯಾಚರಣೆ ಚುರುಕು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ದಿಲ್ಲದೆ ಚಿಗುರೊಡೆದು ಬಡವರ ರಕ್ತ ಹೀರುತ್ತಿದ್ದ ಮೀಟರ್ ಬಡ್ಡಿ ದಂಧೆಯ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಈಗ ಸಮರ ಸಾರಿದೆ. ಇತ್ತೀಚೆಗೆ ಮುಂಡಗೋಡಿನಲ್ಲಿ ನಡೆದ ಮೀಟರ್ ಬಡ್ಡಿ ದಂಧೆಯ ಪ್ರಮುಖ ವ್ಯಕ್ತಿ ಎನ್ನಲಾದ ಜಮೀರ್ ಅಹ್ಮದ್ NMD ಕೊಲೆ ಪ್ರಕರಣವು ಈ ಕರಾಳ ದಂಧೆಯ ಹಲವು ಆಯಾಮಗಳನ್ನು ತೆರೆದಿಟ್ಟಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಏಳು ಮಂದಿ ಆರೋಪಿತರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಅವರ ನೇತೃತ್ವದ ತನಿಖಾ ತಂಡವು ಮೃತ ಜಮೀರ್ ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕೇವಲ ಸಾಮಾನ್ಯ ಕರೆಗಳಷ್ಟೇ ಅಲ್ಲದೆ, ವಾಟ್ಸಾಪ್ ಕರೆಗಳ ಬಗ್ಗೆಯೂ ತಾಂತ್ರಿಕ ಮಾಹಿತಿ ಕಲೆಹಾಕಲಾಗುತ್ತಿದೆ. ಈ ತನಿಖೆಯು ಜಿಲ್ಲೆಯಲ್ಲಿ ದಂಧೆಕೋರರು ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬ ಪ್ರಮುಖ ಮಾಹಿತಿಯನ್ನು ಹೊರಹಾಕುವ ಸಾಧ್ಯತೆಯಿದೆ.

ವಿಶೇಷವೆಂದರೆ, ತನಿಖಾ ತಂಡವು ವ್ಯವಸ್ಥೆಯಲ್ಲಿರುವ ಕೆಲವರ ನಿಕಟ ಸಂಪರ್ಕದ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಆಳವಾದ ತನಿಖೆ ನಡೆಯುತ್ತಿದೆ. ಇಲಾಖೆಯ ಗೌರವಕ್ಕೆ ಧಕ್ಕೆ ಬಾರದಂತೆ, ದಂಧೆಕೋರರೊಂದಿಗೆ ಅನಗತ್ಯ ಸಂಪರ್ಕ ಹೊಂದಿರುವವರ ಬಗ್ಗೆಯೂ ಆಂತರಿಕವಾಗಿ ಸೂಕ್ಷ್ಮ ನಿಗಾ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹಿರಿಯ ಮುತ್ಸದ್ದಿ, ಜಿಲ್ಲಾ ಪರಿಷತ್ ಪ್ರಥಮ ಅಧ್ಯಕ್ಷ ರಮಾನಂದ ನಾಯಕ ನಿಧನ

ಮೀಟರ್ ಬಡ್ಡಿ ದಂಧೆ ಹಾಗೂ ರೌಡಿ ಚಟುವಟಿಕೆಗಳ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುವವರ ಪಟ್ಟಿಯನ್ನು ಇಲಾಖೆ ಈಗಾಗಲೇ ಸಿದ್ಧಪಡಿಸಿದೆ. ಈ ವಾರದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ನಂತರ, ದಂಧೆಯಲ್ಲಿ ತೊಡಗಿರುವ ಪ್ರಮುಖರನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಎಸ್‌ಪಿ ದೀಪನ್ ಅವರ ತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇದು ಜಿಲ್ಲೆಯ ಸಾಲದ ಸುಳಿಗೆ ಸಿಲುಕಿದ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ಮೀಟರ್ ಬಡ್ಡಿ ಕಿರುಕುಳಕ್ಕೆ ಒಳಗಾದವರು ಯಾವುದೇ ಭಯವಿಲ್ಲದೆ ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಬಹುದು. ಸಾರ್ವಜನಿಕರ ಹಿತದೃಷ್ಟಿಯಿಂದ ಇಲಾಖೆಯು 9480805201 ಈ ವಿಶೇಷ ಸಹಾಯವಾಣಿಯನ್ನು ಪ್ರಕಟಿಸಿದೆ.

ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಭರವಸೆ ನೀಡಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೈಗೊಂಡಿರುವ ಈ ಕಟ್ಟುನಿಟ್ಟಿನ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...