ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ ಏಳು ದ್ವೀಪಗಳ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಕರಾವಳಿ ಭಾಗಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

- Advertisement -

ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ ಮಧ್ಯಲಿಂಗಡ್‌, ದೇವಗಡ, ಹಾಗ್‌, ಮೊಂಗೆರಗುಡ್ಡ, ಕಿರಿಕುಂದ, ಅಂಕನಿ ಚೆಗ್ಗುಡು ಮತ್ತು ಕುರುಮಗಡ ದ್ವೀಪಗಳ ಒಟ್ಟು 59 ಎಕರೆ 31 ಗುಂಟೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಈ ಯೋಜನೆಯಿಂದ ₹307.71 ಕೋಟಿ ಆದಾಯ ಹಂಚಿಕೆ ನಿರೀಕ್ಷಿಸಲಾಗಿದ್ದು, ವಾರ್ಷಿಕ ₹8.7 ಕೋಟಿ ಗುತ್ತಿಗೆ ಶುಲ್ಕ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

ಗುತ್ತಿಗೆ ಶುಲ್ಕದಲ್ಲಿ ಪ್ರತಿ ವರ್ಷ ಶೇ.5ರಷ್ಟು ಹೆಚ್ಚಳವಾಗಲಿದೆ. ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿನ ಅಭಿವೃದ್ಧಿ ಚಟುವಟಿಕೆಗಳು ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಜಾರಿಯಲ್ಲಿರುವ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) 2019 ಅನ್ನು ನಿಯಮಾನುಸಾರ ಪರಿಷ್ಕರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ನಕ್ಷೆಗಳು ಹಾಗೂ ವಸ್ತುಸ್ಥಿತಿಯಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸುವಂತೆ ವಿವಿಧ ವರ್ಗಗಳಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾರವಾರ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ವೆಚ್ಚವನ್ನು ₹98.24 ಕೋಟಿಯಿಂದ ₹250.05 ಕೋಟಿಗೆ ಹೆಚ್ಚಿಸಲು ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಸ್ತುತ ಇರುವ 2,000 ಮೀಟರ್ ರನ್‌ವೇಯನ್ನು A-320 ವಿಮಾನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3,250 ಮೀಟರ್‌ಗೆ ವಿಸ್ತರಿಸುವ ಉದ್ದೇಶವಿದೆ. ಭೂಸ್ವಾಧೀನ, ಬಾಧಿತರ ಪುನರ್ವಸತಿ, ಸಂಪರ್ಕ ರಸ್ತೆ ಹಾಗೂ ಸಿವಿಲ್‌ ಎನ್‌ಕ್ಲೇವ್‌ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಹೆಚ್ಚುವರಿ ವೆಚ್ಚ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಯೋಜನಾ ಮೊತ್ತ ಹೆಚ್ಚಿಸಲಾಗಿದೆ.

ಈವರೆಗೆ 93 ಎಕರೆ 22 ಗುಂಟೆ ಜಮೀನು ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ. ರನ್‌ವೇ ನಿರ್ಮಾಣಕ್ಕೆ 59 ಎಕರೆ 14 ಗುಂಟೆ ಹಾಗೂ ಸಿವಿಲ್‌ ಎನ್‌ಕ್ಲೇವ್‌ ನಿರ್ಮಾಣಕ್ಕೆ 32 ಎಕರೆ 20 ಗುಂಟೆ ಜಮೀನು ಅಗತ್ಯವಿದೆ. ಇದರ ಜೊತೆಗೆ ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗೆ ₹20 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕರ್ನಾಟಕದ ಕರಾವಳಿಯ ಮೀನುಗಾರಿಕಾ ಆರ್ಥಿಕ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕರಾವಳಿ ಪ್ರದೇಶಗಳನ್ನು ವಿಶೇಷ ಸಮುದ್ರ ವಲಯ (SMZ) ಎಂದು ಅಧಿಸೂಚಿಸಲು ಸಚಿವ ಸಂಪುಟ ತೀರ್ಮಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಫುಲೆ 200ನೇ ಜನ್ಮದಿನದ ಅಂಗವಾಗಿ AIDSO ವತಿಯಿಂದ ವಿದ್ಯಾರ್ಥಿ ಶಿಬಿರ

ನವೋದಯದ ಮಹಾನ್ ಚೇತನ, ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ...

ವಿಜಯನಗರ | ಸಾರಿಗೆ ಬಸ್‌ ಆಕ್ಸಲ್ ಕಟ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ಗುರುವಾರ ಒಂದು ಸಾರಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಎಸ್‌ಐಆರ್‌: ಹುನಗುಂದ, ಇಳಕಲ್‌ನಲ್ಲಿ 7,522 ಮತದಾರರಿಗೆ ನೋಟಿಸ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ...