ಉತ್ತರ ಕನ್ನಡ | ಜನಗಣತಿ 2027: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರಿಂದ ಸ್ವಯಂ ಗಣತಿ ವ್ಯವಸ್ಥೆಗೆ ಚಾಲನೆ

Date:

ಉತ್ತರ ಕನ್ನಡ: ಕೇಂದ್ರ ಸರ್ಕಾರದ ‘ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ’ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 2027ರ ಜನಗಣತಿಯ ಅಂಗವಾಗಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಬುಧವಾರ ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿಯನ್ನು ಪೂರ್ಣಗೊಳಿಸುವ ಮೂಲಕ ಜಿಲ್ಲೆಯಲ್ಲಿ ಈ ನೂತನ ವ್ಯವಸ್ಥೆಗೆ ಅಧಿಕೃತ ಚಾಲನೆ ನೀಡಿದರು.

- Advertisement -

ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ಸರಳ ಮತ್ತು ಸುರಕ್ಷಿತವಾದ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಜಿಲ್ಲಾಧಿಕಾರಿಗಳು ಈ ಮಾದರಿ ನಡೆಯನ್ನು ಅನುಸರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಪ್ರಿಲ್ 1 ರಿಂದ 15 ರವರೆಗೆ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸಲು ಅವಕಾಶವಿದೆ ಎಂದು ತಿಳಿಸಿದರು.

ಪ್ರಕ್ರಿಯೆ ಹೇಗೆ? ಮೊಬೈಲ್ ಸಂಖ್ಯೆ ಮತ್ತು ಒಟಿಪಿ (OTP) ಬಳಸಿಕೊಂಡು ಕೇವಲ 5 ರಿಂದ 10 ನಿಮಿಷಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ನೋಂದಣಿ ಮುಗಿದ ನಂತರ ಲಭಿಸುವ ಅರ್ಜಿ ಸಂಖ್ಯೆಯನ್ನು, ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಬೇಕು.

ಇದರಿಂದ ಗಣತಿದಾರರ ಕೆಲಸ ಸುಲಭವಾಗುವುದಲ್ಲದೆ, ಅತೀ ಕಡಿಮೆ ಅವಧಿಯಲ್ಲಿ ನಿಖರ ಮಾಹಿತಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಮಾಜಿ ಶಾಸಕ ವಿ.ಎಸ್. ಪಾಟೀಲ್ ಮುಂದಿನ ನಡೆ ಏನು? ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ

ಜಿಲ್ಲಾಧಿಕಾರಿಗಳು ತಮ್ಮ ಸ್ವಯಂ ಗಣತಿಯ ಮಾಹಿತಿಯನ್ನು ಅಧಿಕಾರಿಗಳ ವಾಟ್ಸಾಪ್ ಸಮೂಹದಲ್ಲಿ ಹಂಚಿಕೊಂಡ ಬೆನ್ನಲ್ಲೇ, ಜಿಲ್ಲಾ ಮತ್ತು ತಾಲೂಕು ಮಟ್ಟದ ಹಲವು ಅಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮಾಹಿತಿಯನ್ನು ದಾಖಲಿಸಿದರು.

ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ನಿವಾಸಕ್ಕೆ ಶಿರಸಿ ತಹಶೀಲ್ದಾರರು, ಪೌರಾಯುಕ್ತರು ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ವಯಂ ಮನೆ ಗಣತಿ ಪ್ರಕ್ರಿಯೆಯನ್ನು ನಡೆಸಿದರು.

ಅಭಿವೃದ್ಧಿಗೆ ಪೂರಕ: ಜನಗಣತಿಯು ದೇಶದ ಭವಿಷ್ಯ ರೂಪಿಸುವಲ್ಲಿ ಮತ್ತು ಆರೋಗ್ಯ, ಶಿಕ್ಷಣ, ವಸತಿ ಸೇರಿದಂತೆ ಮೂಲಸೌಕರ್ಯಗಳ ಹಂಚಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ನೀಡುವ ನಿಖರ ಮಾಹಿತಿಯು ಸರ್ಕಾರದ ಉತ್ತಮ ನೀತಿ ರೂಪಿಸಲು ಆಧಾರವಾಗಲಿದೆ. ಆದ್ದರಿಂದ ಜಿಲ್ಲೆಯ ಜನತೆ ನಿಗದಿತ ಅವಧಿಯಲ್ಲಿ ಈ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...