ಉತ್ತರ ಕನ್ನಡ | ಏಪ್ರಿಲ್. 23, 24ಕ್ಕೆ ಸಿಇಟಿ ಪರೀಕ್ಷೆ; 14 ಕೇಂದ್ರಗಳಲ್ಲಿ ಸಕಲ ಸಿದ್ಧತೆ, ಅಧಿಕಾರಿಗಳಿಗೆ ಎಡಿಸಿ ಸೂಚನೆ

Date:

ಉತ್ತರ ಕನ್ನಡ: ಏಪ್ರಿಲ್ 23 ಮತ್ತು 24 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು (CET) ಅತ್ಯಂತ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯ ಒಟ್ಟು 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 4498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ನಿಟ್ಟಿನಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅವರು ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಆಸನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಸೌಕರ್ಯಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿಯೇ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.

ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸಾಗಾಟದ ವಾಹನಗಳಿಗೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು. ಅಲ್ಲದೆ, ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಜಿಲ್ಲಾ ಪಂಚಾಯತ್‌ನಲ್ಲಿ ವೆಬ್ ಕಾಸ್ಟಿಂಗ್ ಮೂಲಕ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಕಾರವಾರ | ‘ಪ್ರಾಜೆಕ್ಟ್ ಸೀಬರ್ಡ್’ನಿಂದ ಆರ್ಥಿಕ ಚೇತನ: ಸಾವಿರಾರು ಮಂದಿಗೆ ಉದ್ಯೋಗ, ಸ್ಥಳೀಯ ಜೀವನಮಟ್ಟ ಏರಿಕೆ

ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್, ಬ್ಲೂಟೂತ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಂದು ಬಸ್ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ಲೋಪದೋಷಗಳು ಉಂಟಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಾಜಿದ್ ಮುಲ್ಲಾ ಅವರು ಈ ಸಂದರ್ಭದಲ್ಲಿ ತಿಳಿಸಿದರು. ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ, ಜಿ.ಪಂ. ಯೋಜನಾ ನಿರ್ದೇಶಕ ಕರೀಂ ಅಸಾದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...