ಉ.ಕನ್ನಡ | ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

Advertisements

ಖಾಸಗಿ ವಾಹಿನಿ (ಜೀ ಕನ್ನಡ) ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಈ ಹಿಂದೆ ಝೀ ಕನ್ನಡದ ಕಾಮಡಿ ಕಿಲಾಡಿಗಳು ಎಂಬ ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.

ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಈತ ಉತ್ತಮ ಯೋಗಪಟು ಕೂಡ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕಪುಟ್ಟ ಪಾತ್ರಗಳನ್ನು ಮಾಡುತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಗಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಇನ್ನು ರಿಯಾಲಿಟಿ ಶೋನಿಂದ ಪ್ರಸಿದ್ಧರಾಗಿದ್ದ ಇವರು ಸಾಕಷ್ಟು ಅಭಿಮಾನಿಗಳನ್ನ ಸಹ ಹೊಂದಿದ್ದರು. ಆದರೆ, ಅವಕಾಶ ಸಿಗದೇ ಕೂಲಿ ಕೆಲಸ ಮಾಡುತಿದ್ದರು.

ಖಿನ್ನತೆಗೊಳಗಾಗಿ ಇವರು, ‘ಕಳೆದ ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕವಾಗಿ ಹೇಳಿಕೊಂಡಿದ್ದರು. ಕ್ರಿಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದಿದ್ದರು. ಪತ್ನಿ ಜೊತೆ ಮನೆಯೊಂದಕ್ಕೆ ಕೆಲಸಕ್ಕಾಗಿ ತೆರಳಿದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌ ಎಂದು ವರದಿಯಾಗಿದೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X