ಉತ್ತರ ಕನ್ನಡ | ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಆರಂಭ: ಮನೆ ಮನೆಗೆ ಭೇಟಿ ನೀಡುತ್ತಿರುವ ಬಿಎಲ್‌ಒಗಳು

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ 2026ನೇ ಸಾಲಿನ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಎನುಮರೇಷನ್ ಫಾರ್ಮ್‌ಗಳೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಕೈಗೊಂಡಿದ್ದಾರೆ. ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಈವರೆಗೆ 11,58,776 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಮನೆ ಮನೆ ಭೇಟಿ ಕಾರ್ಯಕ್ರಮ ಜೂನ್ 30ರಿಂದ ಆರಂಭವಾಗಿದ್ದು, ಜುಲೈ 29ರವರೆಗೆ ನಡೆಯಲಿದೆ. ಇದೇ ಅವಧಿಯಲ್ಲಿ ಸಂಗ್ರಹವಾಗುವ ಎನುಮರೇಷನ್ ನಮೂನೆಗಳ ಗಣಕೀಕರಣ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಳೆಯ ಅಬ್ಬರ: ದೇವಿಮನೆ ಘಟ್ಟದಲ್ಲಿ ಭೂಕುಸಿತ, ಹಾರವಾಡದಲ್ಲಿ ಕಡಲ ಕೊರೆತ ತೀವ್ರ

ಸದ್ಯ ಜಿಲ್ಲಾದ್ಯಂತ ಬಿಎಲ್‌ಒಗಳು 2,25,784 ಎನುಮರೇಷನ್ ನಮೂನೆಗಳನ್ನು ವಿತರಿಸಿದ್ದು, ಅವುಗಳಲ್ಲಿ 1,504 ನಮೂನೆಗಳನ್ನು ಈಗಾಗಲೇ ಗಣಕೀಕರಣ ಮಾಡಲಾಗಿದೆ. ಕ್ಷೇತ್ರವಾರು ಪ್ರಗತಿಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರ ಮುಂಚೂಣಿಯಲ್ಲಿದ್ದು, ಗರಿಷ್ಠ 568 ನಮೂನೆಗಳ ಗಣಕೀಕರಣ ಪೂರ್ಣಗೊಂಡಿದೆ.

ಮನೆ ಮನೆ ಭೇಟಿಯ ವೇಳೆ ವಿಶೇಷ ಪ್ರಕರಣಗಳನ್ನೂ ಗುರುತಿಸಲಾಗುತ್ತಿದ್ದು, ಜುಲೈ 1ರವರೆಗೆ ಜಿಲ್ಲೆಯಾದ್ಯಂತ ಒಟ್ಟು 57 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 37 ಮರಣ ಹೊಂದಿದ ಮತದಾರರ ಪ್ರಕರಣಗಳು, 17 ಶಾಶ್ವತವಾಗಿ ವಲಸೆ ಹೋದವರ ಪ್ರಕರಣಗಳು ಹಾಗೂ 2 ದ್ವಿಪ್ರತಿ (ಡ್ಯುಪ್ಲಿಕೇಟ್) ಮತದಾರರ ಪ್ರಕರಣಗಳು ಸೇರಿವೆ.

ಭಟ್ಕಳ ಕ್ಷೇತ್ರದಲ್ಲೇ ಗರಿಷ್ಠ 22 ಮರಣ ಪ್ರಕರಣಗಳು ಮತ್ತು 11 ಶಾಶ್ವತ ವಲಸೆ ಪ್ರಕರಣಗಳು ದಾಖಲಾಗಿವೆ. ಮತದಾರರು ಬಿಎಲ್‌ಒಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...