ಉತ್ತರ ಕನ್ನಡ | ಇನಾಂ ವೀರಾಪುರ ಮರ್ಯಾದೆ ಹತ್ಯೆ ಖಂಡನೆ: ಅಧಿಕಾರಿಗಳ ವಜಾಕ್ಕೆ ಬಸವರಾಜ ಸಂಗಮೇಶ್ವರ್ ಆಗ್ರಹ

Date:

ಉತ್ತರ ಕನ್ನಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿಯ ಮರ್ಯಾದೆ ಹತ್ಯೆ ಪ್ರಕರಣವು ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಹಾಗೂ ನೊಂದ ದಲಿತ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ದಸಂಸ ಅಂಬೇಡ್ಕರ್ ಧ್ವನಿ (ಕಾದ್ರೊಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಬಸವರಾಜ ಸಂಗಮೇಶ್ವರ್ ಅವರು ಮುಂಡಗೋಡ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಸವರ್ಣೀಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ದಲಿತ ಸಮುದಾಯದ ಯುವಕನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವುದು ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ಈ ಘಟನೆಯಿಂದ ಇಡೀ ರಾಜ್ಯದ ದಲಿತ ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಮನವಿ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಘಟನೆ ನಡೆದು ಹತ್ತು ದಿನಗಳು ಕಳೆದಿದ್ದರೂ ಸರ್ಕಾರ ಇದುವರೆಗೆ ಸಂತ್ರಸ್ತ ಕುಟುಂಬಕ್ಕೆ ಯಾವುದೇ ಪರಿಹಾರ ಘೋಷಿಸದಿರುವುದು ವಿಷಾದನೀಯ. ನೊಂದ ಕುಟುಂಬಕ್ಕೆ ತಕ್ಷಣವೇ 5 ಕೋಟಿ ರೂಪಾಯಿಗಳ ಪರಿಹಾರ ನೀಡಬೇಕು, ಮೃತರ ಪತಿ ವಿವೇಕಾನಂದ ದೊಡ್ಮನಿ ಅವರಿಗೆ ಸರ್ಕಾರಿ ನೌಕರಿ ಒದಗಿಸಬೇಕು ಹಾಗೂ ವಾಸಕ್ಕೆ ನಿವೇಶನ ಮತ್ತು 4 ಎಕರೆ ಕೃಷಿ ಜಮೀನನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಅಲ್ಲದೆ, ಈ ಪ್ರಕರಣದ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutor) ನೇಮಕ ಮಾಡಬೇಕು ಮತ್ತು ಘಟನೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗಿದೆ.

ಅತಿ ಮುಖ್ಯವಾಗಿ, ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಮತ್ತು ಅಂತ್ಯಕ್ರಿಯೆಯ ವೇಳೆಯಲ್ಲಿ ಜವಾಬ್ದಾರಿಯುತವಾಗಿ ವರ್ತಿಸದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಬಸವರಾಜ ಸಂಗಮೇಶ್ವರ್ ಅವರು ಒತ್ತಾಯಿಸಿದ್ದಾರೆ.

ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿಳಂಬ ನೀತಿಯು ಆರೋಪಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಪ್ರತಿಯೊಂದು ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಸ್ಪೃಶ್ಯತೆ ಅಥವಾ ಜಾತಿ ನಿಂದನೆಯ ಸಣ್ಣ ಸುಳಿವು ಸಿಕ್ಕರೂ ಕೂಡಲೇ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಬೇಕು. ವೀರಾಪುರ ಗ್ರಾಮದಲ್ಲಿ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂತ್ರಸ್ತ ಕುಟುಂಬಕ್ಕೆ ಪೊಲೀಸ್ ಭದ್ರತೆ ನೀಡಬೇಕು.

ಹಾಗೂ ಗ್ರಾಮದಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು ಎಂದು ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...