ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ

Date:

ದ‌ಲಿತ ಸಂಘರ್ಷ ಸಮಿತಿ(ದಸಂಸ) ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ ಎಂದು ಡಿಎಸ್ಎಸ್ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹೇಳಿದರು.

- Advertisement -

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಪಂಚಾಯತ್ ಟೌನ್ ಹಾಲ್‌ನಲ್ಲಿ ಜುಲೈ 28ರ ಭಾನುವಾರದಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ಧ್ವನಿ) ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, “ಸಂವಿಧಾನಕ್ಕೆ ಕುತ್ತು ಬರುತ್ತಿರುವುದರ ಬಗ್ಗೆ ಎಚ್ಚರವಹಿಸಬೇಕು” ಎಂದು ಕರೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಅನೇಕ ಸಾಹಿತಿ ಮತ್ತು ಕವಿಗಳು ಹೋರಾಟದ ಕಿಚ್ಚನ್ನು ಹೊತ್ತಿಸಿದರೆ, ಡಿಎಸ್ಎಸ್ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿರುವ ಸಂಘಟನೆಯಾಗಿದೆ. ಸಮಾಜದಲ್ಲಿ ದೌರ್ಜನ್ಯಕ್ಕೊಳಗಾದವರ ಧ್ವನಿಯಾಗಿ‌ ಕೆಲಸ ಮಾಡಿದೆ. ತುಳಿತಕ್ಕೆ ಒಳಗಾಗಿದ್ದ ಹಲವು ಕುಟುಂಬಗಳ ಧ್ವನಿಯಾಗಿ ಕೆಲಸ ಮಾಡಿದೆ. ಈಗ ದಲಿತ ಸಂಘಟನೆ ಉತ್ತುಂಗದ ಸ್ಥಿತಿಯಲ್ಲಿದೆ. ಅಂಬೇಡ್ಕರ್ ಅವರ ದಯೆದಿಂದ ನಮಗೆಲ್ಲ ಸಮಾನತೆ ಸಿಕ್ಕಿದೆ. ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ, ಈ ದೇಶವನ್ನು ಆಳೋಣ, ಬಾಬಾ ಸಾಹೇಬರು ನಮಗಾಗಿ ಸಂವಿಧಾನ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳೋಣ” ಎಂದು ಕರೆಕೊಟ್ಟರು.

ಕೆಸಿಸಿಸಿ ಬ್ಯಾಂಕ್ ನಿರ್ದೇಶಕರು ಮಾತನಾಡಿ, “ಸ್ವತಃ ಅಂಬೇಡ್ಕರ್ ಅವರು ದಲಿತರ ಮೇಲಿನ ದೌರ್ಜನ್ಯ ಯಾವ ರೀತಿ ಇರುತ್ತದೆ ಎಂಬುದನ್ನು ಅನುಭವಿಸಿದ್ದಾರೆ. ನಮಗೆಲ್ಲರಿಗೂ ಸಂವಿಧಾನಬದ್ಧ ಹಕ್ಕುಗಳನ್ನು ನೀಡಿ ಸಮಾಜದಲ್ಲಿ ತಲೆಯಿತ್ತಿ ನಿಲ್ಲುವಂತೆ ಮಾಡಿದ್ದಾರೆ. ಇತ್ತೀಚೆಗೆ ದಲಿತರಿಗೆ ಮೀಸಲಿಟ್ಟ ಹಣವು ದುರ್ಬಳಕೆ ಆಗುತ್ತಿದೆ ಅನ್ನಿಸುತ್ತಿದೆ. ಅದನ್ನು ತಡೆಯುವುದಕ್ಕೆ ಡಿಎಸ್ಎಸ್ ಈಗ ಮುಂದಾಗಬೇಕು ಮತ್ತು ಹೋರಾಟಗಳಿಂದ ಎಷ್ಟೋ ಬದಲಾವಣೆಗಳಾಗಿವೆ. ಹೀಗಾಗಿ ಪ್ರತಿಭಟನೆ, ಹೋರಾಟಗಳು ನಿರಂತರವಾಗಿರಲಿ” ಎಂದರು.

ಮುಸ್ಲಿಂ ಮುಖಂಡರೊಬ್ಬರು ಮಾತನಾಡಿ, “ನಾವು ರಾಷ್ಟ್ರಭಕ್ತರಾಗಬೇಕೆ ಹೊರತು ಯಾವುದೋ ಒಂದು ಪಕ್ಷದ ಭಕ್ತರಾಗಬಾರದು. ಕಾರಣ, ಪ್ರಸ್ತುತದಲ್ಲಿ ನಮ್ಮ ಸಂವಿಧಾನದ ಆಶಯ ಮರೆತಿದ್ದಕ್ಕೆ ಸಂವಿಧಾನ ಕಾಪಾಡಿಕೊಳ್ಳುವ ವಿಚಾರ ಮಾಡುತ್ತಿದ್ದೇವೆ. ರಾಜಕೀಯ ಪಕ್ಷದವರು ತಮಗೆ ಬೇಕಾದಂತೆ ಸಂವಿಧಾನ ಬಳಿಸಿಕೊಂಡು ಅಂಬೇಡ್ಕರ್ ಕನಸಿಗೆ ಎಳ್ಳುನೀರು ಬಿಡುವ ಮುನ್ನ ನಾವು ಎಚ್ಚೆತ್ತುಕೊಂಡು ಸಂವಿಧಾನ ಉಳಿಸಿಕೊಳ್ಳಬೇಕು. ಸಂವಿಧಾನಕ್ಕೆ ಕುತ್ತು ಬಂದಾಗ ಉಳಿಸಿಕೊಳ್ಳಲು ಸನ್ನದ್ಧರಾಗಬೇಕಿದೆ. ಮಿಸಲಾತಿ‌ ಕಸಿದುಕೊಳ್ಳುವ ಹುನ್ನಾರದ ವಿರುದ್ಧ ನಮ್ಮ‌ ಹಕ್ಕುಗಳಿಗಾಗಿ ನಾವು ನಿಲ್ಲಬೇಕಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಎಲ್‌ವಿಕೆ ಸಮಾಜ ಸೇವಾ ಸಂಸ್ಥೆಯ ಯುವರತ್ನ ಯುವಕರು ಕ್ರಾಂತಿಗೀತೆಗಳ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಸವರಾಜ ಸಂಗಮೇಶ್ವರ, ಹಲವು ಜಿಲ್ಲೆಗಳ ಪದಾಧಿಕಾರಿಗಳು, ಸಂಘಟಕರು, ಗಣ್ಯರು, ಹಲವು ಸಮುದಾಯಗಳ ಮುಖಂಡರು, ಮಹಿಳೆಯರು, ಯುವಜನರು, ಅಂಬೇಡ್ಕರ್ ಅಭಿಮಾನಿಗಳು ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...