ಉತ್ತರ ಕನ್ನಡ | SC-ST ದೌರ್ಜನ್ಯ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕ್ರಮ ಜರುಗಿಸುವಂತೆ ಡಿಸಿ ಲಕ್ಷ್ಮೀಪ್ರಿಯ ಸೂಚನೆ

Date:

Advertisements

ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗುವ SC-ST ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಅನವಶ್ಯಕ ವಿಳಂಬವಾಗುವುದನ್ನು ತಪ್ಪಿಸಿ, ಆದಷ್ಟು ಶೀಘ್ರವಾಗಿ ಪರಿಹಾರ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ 2022 ರಿಂದ ಇಂದಿನವರೆಗೂ ಒಟ್ಟು 168 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4 ಪ್ರಕರಣಗಳು ಇತರೆ ಜಿಲ್ಲೆಗೆ ವರ್ಗಾವಣೆಯಾಗಿವೆ. ಎಫ್‌ಐಆರ್ ದಾಖಲಾಗಿರುವ 153 ಪ್ರಕರಣಗಳಲ್ಲಿ 117.01 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ 108 ಪ್ರಕರಣಗಳಲ್ಲಿ 127.99 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ ಸಂತ್ರಸ್ತರಿಂದ ಅಗತ್ಯ ದಾಖಲೆಗಳನ್ನು ಪಡೆದು ಆದಷ್ಟು ಶೀಘ್ರದಲ್ಲಿ ಪರಿಹಾರ ವಿತರಿಸಬೇಕು” ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲಾ ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಿ, ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಜನರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.ಇದೇ ರೀತಿ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ವಿಚಾರಣೆ ತ್ವರಿತಗೊಳ್ಳುವಂತೆ ಕ್ರಮ ಕೈಗೊಂಡರೆ ಸಂತ್ರಸ್ತರಿಗೆ ಶೀಘ್ರದಲ್ಲಿ ನ್ಯಾಯ ದೊರೆಯುತ್ತದೆ ಎಂದರು.

ಸಭೆಯಲ್ಲಿ ಸದಸ್ಯರು ಮಾತನಾಡಿ, ಕುಮಟಾದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ನೀಡುವುದು, ಸಮುದಾಯ ಭವನಗಳಲ್ಲಿ ನಿಗಧಿಪಡಿಸಿದ ದರವನ್ನು ಕಡಿಮೆ ಮಾಡುವುದು, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸುವುದನ್ನು ತಡೆಯುವುದು, ಬ್ಯಾಂಕ್‌ಗಳಲ್ಲಿ ಸಾಲ ವಿತರಣೆಯನ್ನು ಶೀಘ್ರಗೊಳಿಸುವುದು, ವಸತಿರಹಿತರಿಗೆ ನಿವೇಶನ ಒದಗಿಸುವುದು ಮುಂತಾದ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ದಾಖಲಿಸಿಕೊಂಡು ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಸರ್ಕಾರಿ ಅಭಿಯೋಜಕಿ ಸುನೀತಾ ನಾಗೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X