ಉತ್ತರ ಕನ್ನಡ | ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ, ಮಂಕಾಳ ವೈದ್ಯರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

Date:

ಉತ್ತರ ಕನ್ನಡ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಕೊನೆಕ್ಷಣದಲ್ಲಿ ಹಲವು ಬದಲಾವಣೆಗಳು ನಡೆದಿವೆ. ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಹಿರಿಯ ನಾಯಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕತ್ವ ಪ್ರಮುಖ ಜವಾಬ್ದಾರಿಗಳನ್ನು ನೀಡಲು ಮುಂದಾಗಿದೆ ಎನ್ನಲಾಗಿದೆ.

- Advertisement -

ಆರ್.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನ ಇದೇ ವೇಳೆ ಸಚಿವ ಸ್ಥಾನ ಸಿಗದ ಜಿಲ್ಲೆಯ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಸರ್ಕಾರ ಬುಧವಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಮರುನೇಮಕ ಮಾಡಲಾಗಿದೆ. ಈ ನೇಮಕ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ಮಂಗಳೂರು ಹೈಕೋರ್ಟ್ ಪೀಠಕ್ಕೆ ಉ.ಕನ್ನಡ ಸೇರ್ಪಡೆಗೆ ವಿರೋಧ: ಆ.13ರಂದು ಕಾರವಾರದಲ್ಲಿ ಪಾದಯಾತ್ರೆ

ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನವನ್ನೂ ನೀಡಲಾಗಿದೆ. ಆರ್.ವಿ. ದೇಶಪಾಂಡೆ ಅವರು ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಇದೇ ಜವಾಬ್ದಾರಿ ನೀಡಿರುವುದು ವಿಶೇಷವಾಗಿದೆ. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ದೇಶಪಾಂಡೆ ಅವರು 9ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಲವು ಮುಖ್ಯಮಂತ್ರಿಗಳ ಅವಧಿಯಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು, ರಾಜ್ಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ

ಮಂಕಾಳ ವೈದ್ಯರಿಗೆ ಉಪ ಸಭಾಧ್ಯಕ್ಷ ಸ್ಥಾನ? ಸಚಿವರ ಪಟ್ಟಿಯಲ್ಲಿ ಹೆಸರು ಕೇಳಿಬಂದಿದ್ದರೂ ಅಂತಿಮ ಹಂತದಲ್ಲಿ ಸಚಿವ ಸ್ಥಾನದಿಂದ ಹೊರಗುಳಿದ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರಿಗೆ ಇದೀಗ ಪ್ರಮುಖ ಜವಾಬ್ದಾರಿ ನೀಡಲು ಕಾಂಗ್ರೆಸ್ ನಾಯಕತ್ವ ಮುಂದಾಗಿದೆ ಎನ್ನಲಾಗಿದೆ.

ಆಗಸ್ಟ್ 14ರಂದು ವಿಧಾನಸಭೆಯ ಸ್ಪೀಕರ್ ಹಾಗೂ ಉಪ ಸಭಾಧ್ಯಕ್ಷರ ಚುನಾವಣೆ ನಡೆಯಲಿದ್ದು, ಮಂಕಾಳ ವೈದ್ಯ ಅವರನ್ನು ಉಪ ಸಭಾಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಚಿವ ಸ್ಥಾನ ಕೈತಪ್ಪಿದ್ದ ಅಸಮಾಧಾನವನ್ನು ಈ ಮೂಲಕ ಶಮನಗೊಳಿಸುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ದೇಶಪಾಂಡೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮಹತ್ವದ ಹುದ್ದೆ ನೀಡಲಾಗಿದೆ. ಅದೇ ರೀತಿ ಮಂಕಾಳ ವೈದ್ಯರಿಗೂ ಉಪ ಸಭಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ವ್ಯಕ್ತವಾಗಿದೆ.

ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ವಿಚಾರದಲ್ಲಿ ಕೆಲವು ಭಾಗಗಳಲ್ಲಿ ಉಂಟಾಗಿರುವ ಅಸಮಾಧಾನವನ್ನು ತಗ್ಗಿಸಲು ಕಾಂಗ್ರೆಸ್ ನಾಯಕತ್ವ ಈ ರೀತಿಯ ರಾಜಕೀಯ ಹೊಂದಾಣಿಕೆಯ ಸೂತ್ರಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಮಂಕಾಳ ವೈದ್ಯರಿಗೆ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನ ಹಾಗೂ ಆರ್.ವಿ. ದೇಶಪಾಂಡೆ ಅವರಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನ ನೀಡಿರುವ ಬೆಳವಣಿಗೆ ಜಿಲ್ಲ ಹಾಗೂ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...