ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

Date:

ಉತ್ತರ ಕನ್ನಡ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಈ ಸುದ್ದಿ ಓದಿದ್ದೀರಾ? ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಸರ್ಕಾರದ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸೌಲಭ್ಯಗಳನ್ನು ಒದಗಿಸಲು ಬಿಡುಗಡೆಯಾಗುವ ಅನುದಾನವನ್ನು ವಿಳಂಬ ಮಾಡದೆ, ನಿಗದಿತ ಗುರಿಗೆ ಅನುಗುಣವಾಗಿ ಸಂಪೂರ್ಣವಾಗಿ ವೆಚ್ಚ ಮಾಡಬೇಕು. ಈ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ನಡೆದ ಪ್ರಕರಣಗಳು ವರದಿಯಾದ ತಕ್ಷಣ ಅಧಿಕಾರಿಗಳು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಅಗತ್ಯ ಮಾಹಿತಿ ನೀಡಿ, ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಇದೇ ವೇಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟ ಜಾಗ ಒತ್ತುವರಿಯಾಗಿರುವುದು ಕಂಡುಬಂದರೆ ತಕ್ಷಣ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ್ ವೈ.ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ...

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ...

ಹಾವೇರಿ | ಸ್ವಂತ ಖರ್ಚಿನಲ್ಲಿ‌ ಶ್ರಮದಾನ ಮಾಡಿದ ಯುವಕರು

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಲಕ್ಷ್ಮೀಪುರ-ಬಿಡಾರದ ವಿಶ್ವ ಮಿತ್ರ ಯುವಕರ ಸಂಘದ ಪದಾಧಿಕಾರಿಗಳು...

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...