ಉತ್ತರ ಕನ್ನಡ | ಕಾರವಾರ ಮತ್ತು ಹಳಿಯಾಳ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಜಿಲ್ಲಾದ್ಯಂತ ಆಯ್ಕೆ ಪ್ರಕ್ರಿಯೆ ಆರಂಭ

Date:

ಉತ್ತರ ಕನ್ನಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ಮತ್ತು ಹಳಿಯಾಳದ ಕ್ರೀಡಾ ವಸತಿ ನಿಲಯಗಳಿಗೆ 2026-27ನೇ ಸಾಲಿನ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.

- Advertisement -

ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ನಿಟ್ಟಿನಲ್ಲಿ ಎಲ್ಲಾ ತಾಲೂಕು ಕೇಂದ್ರಗಳ ಕ್ರೀಡಾಂಗಣಗಳಲ್ಲಿ ಆಯ್ಕೆ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ 5ನೇ ತರಗತಿ, 8ನೇ ತರಗತಿ ಹಾಗೂ ಪ್ರಥಮ ಪಿಯುಸಿ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

5ನೇ ತರಗತಿಗೆ ಪ್ರವೇಶ ಪಡೆಯುವವರು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು ಮತ್ತು ಜೂನ್ 1, 2026ಕ್ಕೆ 11 ವರ್ಷ ಮೀರಿರಬಾರದು. 8ನೇ ತರಗತಿಗೆ ಸೇರಬಯಸುವವರು 7ನೇ ತರಗತಿಯಲ್ಲಿರಬೇಕು ಹಾಗೂ 14 ವರ್ಷದೊಳಗಿರಬೇಕು.

ಅದೇ ರೀತಿ, ಪ್ರಥಮ ಪಿಯುಸಿ ಪ್ರವೇಶಕ್ಕೆ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷದೊಳಗಿನ ಕ್ರೀಡಾಪಟುಗಳು ಅರ್ಹರಾಗಿರುತ್ತಾರೆ. 8ನೇ ತರಗತಿ ಮತ್ತು ಪಿಯುಸಿ ಅಭ್ಯರ್ಥಿಗಳು ತಾಲೂಕು, ಜಿಲ್ಲಾ ಅಥವಾ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ದಾಖಲೆಗಳನ್ನು ಹೊಂದಿರಬೇಕು.

ಅಥ್ಲೆಟಿಕ್ಸ್, ಕುಸ್ತಿ, ವಾಲಿಬಾಲ್, ಜುಡೋ, ಬಾಸ್ಕೆಟ್ ಬಾಲ್ ಮತ್ತು ಫುಟ್‌ಬಾಲ್ ವಿಭಾಗಗಳಲ್ಲಿ ಆಯ್ಕೆ ನಡೆಯಲಿದೆ. ಬಾಸ್ಕೆಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳಿಗೆ ವಿಶೇಷವಾಗಿ ಎತ್ತರದ ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಕಿರಿಯರ ವಿಭಾಗದ ಬಾಲಕರಿಗೆ ಕನಿಷ್ಠ 170-172 ಸೆಂ.ಮೀ ಹಾಗೂ ಬಾಲಕಿಯರಿಗೆ 163 ಸೆಂ.ಮೀ ಎತ್ತರವಿರಬೇಕು.

ಹಿರಿಯರ ವಿಭಾಗದ (ಪಿಯುಸಿ) ಬಾಲಕರಿಗೆ 180-184 ಸೆಂ.ಮೀ ಮತ್ತು ಬಾಲಕಿಯರಿಗೆ 165-168 ಸೆಂ.ಮೀ ಎತ್ತರ ಕಡ್ಡಾಯಗೊಳಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ವೇಗದ ಓಟ, ಲಾಂಗ್ ಜಂಪ್ ಸೇರಿದಂತೆ ವಿವಿಧ ದೈಹಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಬೇಡ್ತಿ-ವರದಾ ಯೋಜನೆಗೆ ಅಡಿಪಾಯ ಹಾಕಿದ್ದೇ ಬಿಜೆಪಿ: ಸಚಿವ ಮಂಕಾಳ ವೈದ್ಯ ವಾಗ್ದಾಳಿ

ಆಯ್ಕೆಯಾದ ಕ್ರೀಡಾಪಟುಗಳಿಗೆ ನುರಿತ ತರಬೇತುದಾರರಿಂದ ವಿಶೇಷ ತರಬೇತಿ ನೀಡಲಾಗುವುದು. ಉಚಿತ ವಸತಿ, ಪೌಷ್ಟಿಕ ಆಹಾರ, ಸಮವಸ್ತ್ರ ಮತ್ತು ಕ್ರೀಡಾ ಕಿಟ್‌ಗಳನ್ನು ಸರ್ಕಾರದಿಂದ ಒದಗಿಸಲಾಗುತ್ತದೆ. ಅಭ್ಯರ್ಥಿಗಳು ಇಚ್ಛಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅವಕಾಶವಿರುತ್ತದೆ. ಆಯ್ಕೆಗೆ ಬರುವವರು ಆಧಾರ್ ಕಾರ್ಡ್, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣ ಪತ್ರ ಮತ್ತು ಜನನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು.

ಜಿಲ್ಲೆಯ ವಿವಿಧೆಡೆ ಬೆಳಿಗ್ಗೆ 10 ಗಂಟೆಗೆ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದ್ದು, ವಿವರಗಳು ಹೀಗಿವೆ: ಜ. 19, ಯಲ್ಲಾಪುರ ತಾಲೂಕು ಕ್ರೀಡಾಂಗಣ, ಜ. 20, ಕುಮಟಾದ ಮಂಕಿ ಕ್ರೀಡಾಂಗಣ ಮತ್ತು ಜೋಯಿಡಾ ತಾಲೂಕು ಕ್ರೀಡಾಂಗಣ. ಜ. 21, ಸಿದ್ದಾಪುರ ಮತ್ತು ಶಿರಸಿಯ ಜಿಲ್ಲಾ ಕ್ರೀಡಾಂಗಣ, ಜ. 22, ದಾಂಡೇಲಿಯ ಡಿ.ಎಫ್.ಎ ಕ್ರೀಡಾಂಗಣ ಮತ್ತು ಮುಂಡಗೋಡ ತಾಲೂಕು ಕ್ರೀಡಾಂಗಣ, ಜ. 23, ಅಂಕೋಲಾ ತಾಲೂಕು ಕ್ರೀಡಾಂಗಣ, ಜ. 24, ಹಳಿಯಾಳ ತಾಲೂಕು ಕ್ರೀಡಾಂಗಣ. ಜ. 25, ಕಾರವಾರದ ಮಾಲಾದೇವಿ ಕ್ರೀಡಾಂಗಣ, ಜ. 28, ಹೊನ್ನಾವರದ ಎಸ್.ಡಿ.ಎಮ್. ಕಾಲೇಜು, ಜ. 29, ಭಟ್ಕಳ ತಾಲೂಕು ಕ್ರೀಡಾಂಗಣ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿಗಳು ಅಥವಾ ತರಬೇತುದಾರರನ್ನು ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...