ಉತ್ತರ ಕನ್ನಡ | ‘SIR ಕಪ್’ ಕ್ರಿಕೆಟ್‌ನಲ್ಲಿ ಬ್ಯಾಟ್ ಬೀಸಿದ ಡಾ. ದಿಲೀಶ್ ಶಶಿ; ಎನ್ಯುಮರೇಷನ್ ಫಾರಂ ಭರ್ತಿ ಮಾಡಿ ಸಲ್ಲಿಸಲು ಮನವಿ

Date:

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಮನವಿ ಮಾಡಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಎಸ್‌ಐಆರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಿಗೆ ಸಮರ್ಪಕ ಮಾಹಿತಿ ತಲುಪಿಸುವ ಜವಾಬ್ದಾರಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್), ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳ ಮೇಲಿದೆ. ಈಗಾಗಲೇ ಜಾಗೃತಿ ಜಾಥಾ, ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಪತ್ರ ಬರೆಯಿಸುವ ಕಾರ್ಯಕ್ರಮ ಸೇರಿದಂತೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ LPG ಸಿಲಿಂಡರ್ ಬಳಕೆ ನಿಷೇಧ: ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ

ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಪ್ರತಿದಿನ ಒತ್ತಡದ ನಡುವೆ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ರೀಡೆ ಮನರಂಜನೆ, ಮಾನಸಿಕ ನೆಮ್ಮದಿ ಹಾಗೂ ಪರಸ್ಪರ ಸಮನ್ವಯವನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಪಂದ್ಯಾವಳಿಯಲ್ಲಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪತ್ರಕರ್ತರ ತಂಡಗಳು ಭಾಗವಹಿಸಿದ್ದವು. ಪೊಲೀಸ್ ತಂಡದ ವಿರುದ್ಧದ ಪಂದ್ಯದಲ್ಲಿ ಜಿಲ್ಲಾ ಪಂಚಾಯತ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡಾ. ದಿಲೀಶ್ ಶಶಿ ಕೊನೆಯ ಓವರ್‌ವರೆಗೂ ತಂಡಕ್ಕೆ ಆಸರೆಯಾಗಿ ನಿಂತು ತಂಡ ಉತ್ತಮ ಮೊತ್ತ ಸೇರಿಸಲು ನೇರವಾದರು.

ಫೈನಲ್ ಪಂದ್ಯ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ ನಡುವೆ ನಡೆಯಿತು ಈ ಪಂದ್ಯದಲ್ಲಿ ಪೋಲಿಸ್ ಇಲಾಖೆ ತಂಡ ಜಯಭೇರಿ ಬಾರಿಸಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಏಗನಗೌಡರ್, ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ. ಹರಿಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...