ಉತ್ತರ ಕನ್ನಡ | ಶಾಸಕ ಸತೀಶ್ ಸೈಲ್‌ಗೆ ಇಡಿ ಶಾಕ್; ಕಾರವಾರದ ನಿವಾಸದ ಮೇಲೆ ದಾಳಿ

Date:

Advertisements

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಬುಧವಾರ ಮುಂಜಾನೆ ಇಡಿ ಅಧಿಕಾರಿಗಳ ತಂಡವು ಶಾಸಕರ ಕಾರವಾರದ ಚಿತ್ತಾಕುಲದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ.

ಖಾಸಗಿ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಶಾಸಕರ ನಿವಾಸವನ್ನು ಸುತ್ತುವರಿದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಅವರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಮನೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಮನೆಯಲ್ಲಿದ್ದ ನೌಕರರನ್ನು ಪ್ರಶ್ನಿಸುತ್ತಿದ್ದಾರೆ ಮತ್ತು ಮನೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಇಡಿ ಅಧಿಕಾರಿಗಳು ಶಾಸಕರಿಗೆ ಸಂಬಂಧಿಸಿದ ‘ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ’ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಕೂಡ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಸೈಲ್ ಅವರನ್ನು ಬಂಧಿಸಲಾಗಿತ್ತು.

Advertisements

ಇದನ್ನೂ ಓದಿ: ಉತ್ತರ ಕನ್ನಡ | ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ ನಡೆಸಲು ಆದೇಶ

ಈ ದಾಳಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇಡಿ ತನಿಖೆ ಮುಗಿದ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X