ಉತ್ತರ ಕನ್ನಡ | ಆತಂಕ ಸೃಷ್ಟಿಸಿದ ಇ-ಮೇಲ್ ಬಾಂಬ್ ಬೆದರಿಕೆಗಳು: ಭಟ್ಕಳ, ಕಾರವಾರ ತಹಶೀಲ್ದಾರ್ ಕಚೇರಿಗಳಲ್ಲಿ ತಪಾಸಣೆ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಕಾರವಾರದ ತಹಶೀಲ್ದಾರ್ ಕಚೇರಿಗಳಿಗೆ ಸತತ ಎರಡು ದಿನಗಳ ಅಂತರದಲ್ಲಿ ಬಂದ ಇ-ಮೇಲ್ ಬಾಂಬ್ ಬೆದರಿಕೆಗಳು ಜಿಲ್ಲಾಡಳಿತ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದವು. ಆದಾಗ್ಯೂ, ವ್ಯಾಪಕ ತಪಾಸಣೆಯ ನಂತರ ಈ ಎರಡೂ ಬೆದರಿಕೆಗಳು ಹುಸಿ ಕರೆಯೆಂದು ದೃಢಪಟ್ಟಿವೆ.

- Advertisement -

ಮೊದಲಿಗೆ ಮಂಗಳವಾರ ಭಟ್ಕಳ ತಹಶೀಲ್ದಾರ್ ಕಚೇರಿಗೆ ಬೆದರಿಕೆ ಸಂದೇಶ ಬಂದಿದ್ದರೆ, ಬೆಳಿಗ್ಗೆ ಕಾರವಾರ ತಹಶೀಲ್ದಾರ್ ಕಚೇರಿಗೆ ಇದೇ ಮಾದರಿಯ ಇ-ಮೇಲ್ ಬಂದಿತ್ತು. ಕಾರವಾರ ತಹಶೀಲ್ದಾರ್ ಕಚೇರಿಗೆ ಸಂದೇಶ ಬಂದ ತಕ್ಷಣ, ತಹಶೀಲ್ದಾರ್ ನಿಶ್ಕಲ್ ನರೋನ್ಹಾ ಅವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಂಪೂರ್ಣ ಕಚೇರಿಯನ್ನು ಜಾಲಾಡಿ ತಪಾಸಣೆ ನಡೆಸಿದ ನಂತರ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಬಂದಿರುವುದು ಸುಳ್ಳು ಅಥವಾ ವಂಚನೆಯ ಕೃತ್ಯ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.”ಮೇಲ್ನೋಟಕ್ಕೆ ಇದೊಂದು ಕಟ್ಟುಕಥೆಯಂತೆ ಕಂಡುಬಂದರೂ, ನಾವು ಭದ್ರತಾ ದೃಷ್ಟಿಯಿಂದ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ರೀತಿಯ ತಪಾಸಣೆಗಳನ್ನು ನಡೆಸಿದ್ದೇವೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

1000377292

ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಎಂ.ಎನ್., “ಭಟ್ಕಳ ಮತ್ತು ಕಾರವಾರ ಕಚೇರಿಗಳಿಗೆ ಬಂದಿರುವ ಇ-ಮೇಲ್ ಬೆದರಿಕೆಗಳು ಒಂದೇ ಮಾದರಿಯಲ್ಲಿದ್ದು, ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು. ಈ ಹಿಂದೆ ಜೂನ್ ತಿಂಗಳಿನಲ್ಲಿ ಭಟ್ಕಳ ಪೊಲೀಸ್ ಠಾಣೆಗೂ ಇದೇ ರೀತಿಯ ಬೆದರಿಕೆ ಬಂದಿತ್ತು, ಆಗ ಆರೋಪಿಯನ್ನು ಬಂಧಿಸಲಾಗಿತ್ತು

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು: ಪ್ರಾಯೋಗಿಕ ಕೃಷಿ ಅಧ್ಯಯನಕ್ಕೆ ಸಾಕ್ಷಿಯಾದ ಹುಲ್ಕುತ್ರಿ ಶಾಲೆ

ಪ್ರಸ್ತುತ ಇ-ಮೇಲ್ ಕಳುಹಿಸಿದವರ ಮೂಲವನ್ನು ಪತ್ತೆಹಚ್ಚಲು ಸೈಬರ್ ಠಾಣಾ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಜೊತೆಗೆ, ಜಿಲ್ಲೆಯ ಇತರೆ ಸರ್ಕಾರಿ ಕಚೇರಿಗಳಿಗೂ ಇಂತಹ ಬೆದರಿಕೆಗಳು ಬಂದಿವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಸದ್ಯ ಎರಡೂ ಕಚೇರಿಗಳಲ್ಲಿ ದೈನಂದಿನ ಕಾರ್ಯಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಎಸ್ಪಿ ಮನವಿ ಮಾಡಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡುವಂತೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...