ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

Date:

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮವನ್ನು ಮತ್ತಷ್ಟು ಸುಸ್ಥಿರ, ಪ್ರವಾಸಿಗ ಸ್ನೇಹಿ ಹಾಗೂ ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಾಗೌರಿ ವಿ. ಭಟ್ ಹೇಳಿದರು.

- Advertisement -

ಭಾನುವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ–2026ರ ಅಂಗವಾಗಿ ಕಾಸರಗೋಡು ಇಕೋ ಬೀಚ್‌ನಲ್ಲಿ ಆಯೋಜಿಸಿದ್ದ ವಿವಿಧ ಜಾಗೃತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು.‌ ಉತ್ತರ ಕನ್ನಡ ಜಿಲ್ಲೆ ನೈಸರ್ಗಿಕ, ಸಾಂಸ್ಕೃತಿಕ ಹಾಗೂ ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮರ್ಥ್ಯ ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಜಿಲ್ಲೆಯ ಕಡಲತೀರಗಳು, ಜಲಪಾತಗಳು, ವನ್ಯಜೀವಿ ತಾಣಗಳು, ಕೋಟೆಗಳು, ಸ್ಥಳೀಯ ಆಹಾರ ಹಾಗೂ ಕರಕುಶಲ ಉತ್ಪನ್ನಗಳನ್ನು ದೇಶ-ವಿದೇಶದ ಪ್ರವಾಸಿಗರಿಗೆ ತಲುಪಿಸಲು ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಗಣೇಶ ನಾಯ್ಕ ಅವರು ‘ಡಿಜಿಟಲ್ ತಂತ್ರಜ್ಞಾನ ಮತ್ತು AI ಸದ್ಬಳಕೆ ಹಾಗೂ ಸುಸ್ಥಿರ ಪ್ರವಾಸೋದ್ಯಮ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಿಜಿಟಲ್ ಅಜೆಂಡಾ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಪ್ರವಾಸೋದ್ಯಮದ ಮರುಸೃಷ್ಟಿ’ ಆಶಯದಡಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಮಾಹಿತಿ ವ್ಯವಸ್ಥೆ, ಸ್ಮಾರ್ಟ್ ಸೇವೆಗಳು ಹಾಗೂ AI ತಂತ್ರಜ್ಞಾನದ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು.

ಪ್ರವಾಸಿಗರಿಗಾಗಿ ವಿವಿಧ ಮನರಂಜನಾ ಕ್ರೀಡಾ ಚಟುವಟಿಕೆಗಳನ್ನೂ ಆಯೋಜಿಸಲಾಗಿತ್ತು. ‘ಸ್ವಚ್ಛ ಪ್ರವಾಸಿ ತಾಣ–ಸುಸ್ಥಿರ ಪ್ರವಾಸೋದ್ಯಮ’ ಪರಿಕಲ್ಪನೆಯಡಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ, ಗೋಕರ್ಣ ಮುಖ್ಯ ಕಡಲತೀರ, ಮುರುಡೇಶ್ವರ ಕಡಲತೀರ, ಸಹಸ್ರಲಿಂಗ ಹಾಗೂ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಈ ವೇಳೆ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ, ತ್ಯಾಜ್ಯ ವಿಂಗಡಣೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಪ್ರವಾಸಿಗರು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಕಿರಣ ಕುಮಾರ ಎಂ.ಜೆ., ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ರಮೇಶ ಮೇಸ್ತಾ, ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ, ಸ್ಥಳೀಯ ಸಾರ್ವಜನಿಕರು ಹಾಗೂ ಪ್ರವಾಸೋದ್ಯಮ ಉದ್ಯಮದ ಪಾಲುದಾರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ...

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...