ಉತ್ತರ ಕನ್ನಡ | ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲೇ ಉದ್ಯೋಗ: ಆಗಸ್ಟ್ 15ರಿಂದ ಜಾಬ್ ಕಾರ್ಡ್ ಮೇಳ

Date:

ಉತ್ತರ ಕನ್ನಡ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯಾದ್ಯಂತ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

- Advertisement -

ಜಿಲ್ಲೆಯಲ್ಲಿ ಒಟ್ಟು 2.01 ಲಕ್ಷ ನೋಂದಾಯಿತ ಉದ್ಯೋಗ ಚೀಟಿಗಳಿದ್ದು, ಈ ಪೈಕಿ ಕೇವಲ 0.72 ಲಕ್ಷ ಕುಟುಂಬಗಳು ಮಾತ್ರ ಸಕ್ರಿಯವಾಗಿ ಯೋಜನೆಯಲ್ಲಿ ಪಾಲ್ಗೊಳ್ಳುತ್ತಿವೆ. ಬಾಕಿ ಉಳಿದಿರುವ ಕುಟುಂಬಗಳನ್ನು ತಲುಪಿ ಯೋಜನೆಯ ಪ್ರಯೋಜನ ಒದಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯತಿಗಳಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈಗಾಗಲೇ ಮನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವವರ ಹೊರತಾಗಿ ಅರ್ಹ ಕುಟುಂಬಗಳು ತಮ್ಮ ಗ್ರಾಮ ಪಂಚಾಯತಿಗೆ ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಹೊಸದಾಗಿ ಗ್ಯಾರಂಟಿ ಕಾರ್ಡ್ (ಉದ್ಯೋಗ ಚೀಟಿ) ಪಡೆಯಬಹುದಾಗಿದೆ. ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪೂರ್ಣಗೊಳಿಸದವರು ಕೂಡ ಅಭಿಯಾನದ ಸಂದರ್ಭದಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯುವ ವಿಶೇಷ ಅಭಿಯಾನದಲ್ಲಿ ನಿಷ್ಕ್ರಿಯ ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳನ್ನು ಗುರುತಿಸಿ ಮನೆ ಮನೆಗೆ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಯೋಜನೆಯಡಿ ಲಭ್ಯವಿರುವ ಅಕುಶಲ ಉದ್ಯೋಗ ಹಾಗೂ ವೈಯಕ್ತಿಕ ಸವಲತ್ತುಗಳ ಕುರಿತು ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುವುದು.

ಗ್ರಾಮೀಣ ಭಾಗದ ದುರ್ಬಲ ವರ್ಗದ ಜನರ ಯೋಜನಾ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು, ಉದ್ಯೋಗ ಸೃಜನೆಯ ಮೂಲಕ ಆರ್ಥಿಕ ಹಾಗೂ ಜೀವನೋಪಾಯ ಭದ್ರತೆ ಕಲ್ಪಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಲ ಸಂರಕ್ಷಣೆ, ಅಂತರ್ಜಲ ಮರುಪೂರಣ ಹಾಗೂ ದೀರ್ಘಕಾಲೀನ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು.

ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಉದ್ಯೋಗ ಅರಸಿ ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ತಡೆಯುವ ಆಶಯವೂ ಯೋಜನೆಯಲ್ಲಿದೆ. ಗ್ರಾಮೀಣ ಭಾಗದ ಅಕುಶಲ ಕೂಲಿಕಾರರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಈ ಜನಪರ ಯೋಜನೆಯ ಸದುಪಯೋಗವನ್ನು ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು.

ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದಾಗಿದೆ. “ವಿಬಿ-ಜಿ ರಾಮ್-ಜಿ ಯೋಜನೆಯ ಉಪಯೋಗವನ್ನು ಅರ್ಹ ಫಲಾನುಭವಿಗಳ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಆಯೋಜಿಸಲಾಗಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಅಭಿಯಾನದ ಯಶಸ್ಸಿಗೆ ಜನರು ಸಹ ಅಗತ್ಯ ಸಹಕಾರ ನೀಡಬೇಕು,” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...