ಉತ್ತರ ಕನ್ನಡ | ಪಿಒಪಿ ಗಣೇಶ ಹಾಗೂ ಡಿಜೆ ಬಳಕೆಗೆ ನಿಷೇಧ ಹೇರಿದ ಪರಿಸರ ಅಧಿಕಾರಿಗಳು

Date:

Advertisements

ಈ ಬಾರಿಯ ಗಣೇಶ ಹಬ್ಬಕ್ಕೆ ಪಿ.ಒ.ಪಿ ಗಣೇಶ ಮೂರ್ತಿ ಹಾಗೂ ಡಿ.ಜೆ. ಬಳಕೆಗೆ ಉತ್ತರ ಕನ್ನಡ ಜಿಲ್ಲೆಯ ಪರಿಸರ ಅಧಿಕಾರಿಗಳು ನಿಷೇಧ ಹೇರಿದ್ದಾರೆ.

ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಗಣೇಶನ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ / ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಂತೆ ಹಾಗೂ ಡಿ. ಜೆ. ಯನ್ನು ಬಳಸದಂತೆ ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.

ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಮೂರ್ತಿಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಬಳಸುವ ಧ್ವನಿವರ್ಧಕಗಳಿಂದ (DJ, Loud speaker, Mike etc) ಹೊರಸೂಸುವ ಶಬ್ಧಮಾಲಿನ್ಯದಿಂದ ಚಿಕ್ಕ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದoತೆ ಶಬ್ಧಮಾಲಿನ್ಯವನ್ನು ತಡೆಗಟ್ಟಲು Noise Pollution (Regulation and Control) Rules, 2000 ರಲ್ಲಿನ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಯಾವುದೇ ತರಹದ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಉತ್ಸವ ಆಚರಿಸಲು ಬೇಕಾದ ಪೂರ್ವ ತಯಾರಿಗೆ ಸಂಬoಧಿಸಿದoತೆ, ಸ್ಥಳೀಯ ಸಂಸ್ಥೆಗಳಿoದ ಅನುಮೋದನೆ ಪಡೆಯುವುದು ನಿಯಮಾನುಸಾರ ಧ್ವನಿವರ್ಧಕಗಳನ್ನು ಬಳಸಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು.

ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಹಬ್ಬದ ಸಂದರ್ಭದಲ್ಲಿ ಸಿಡಿಸಲಾಗುವ ಪಟಾಕಿಯಿಂದ ಚಿಕ್ಕ ಮಕ್ಕಳಿಗೆ, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದoತೆ ತಡೆಯಲು ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಶಿಫಾರಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ Council of Scientific & Industrial Research) & NEERI (National Environmental Engineering Research Institute)ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಇರುತ್ತದೆ.

ಸಾರ್ವಜನಿಕ ಹಿತದೃಷ್ಟಿಯಿಂದ ರಾತ್ರಿ 8 ಗಂಟೆಯಿoದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸಿಡಿಸಬಹುದು. ರಾತ್ರಿ 10 ಗಂಟೆಯ ನಂತರ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಪ್ರಕಟಣೆಯನ್ನು ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾಗಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಉತ್ತರ ಕನ್ನಡ ಜಿಲ್ಲೆಯ ನಾಗರಿಕರು ಸಹಕರಿಸಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವಂತೆ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

Download Eedina App Android / iOS

X