ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ ಉತ್ತರ ಕನ್ನಡ ಜಿಲ್ಲೆಯ
ಆರು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 11,39,623 ಮತದಾರರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಆಲಳ್ಳಿಯಲ್ಲಿ ವೃದ್ಧೆ ಅನುಮಾನಾಸ್ಪದ ಸಾವು; ₹1.70 ಲಕ್ಷ ನಗದು, ಚಿನ್ನಾಭರಣ ನಾಪತ್ತೆ
ಅಂತಿಮ ಪಟ್ಟಿಯ ಪ್ರಕಾರ ಜಿಲ್ಲೆಯಲ್ಲಿ 5,70,006 ಪುರುಷ ಮತದಾರರು, 5,69,614 ಮಹಿಳಾ ಮತದಾರರು ಹಾಗೂ ಮೂವರು ತೃತೀಯ ಲಿಂಗಿ ಮತದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.





