ಉತ್ತರ ಕನ್ನಡ | 14-15 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ: ಗರ್ಭಕಂಠ ಕ್ಯಾನ್ಸರ್ ತಡೆಗೆ ಜಿಲ್ಲಾಧಿಕಾರಿ ಸೂಚನೆ

Date:

ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೆಚ್.ಪಿ.ವಿ. ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಭಾರತದಲ್ಲಿ ಮಹಿಳೆಯರನ್ನು ಕಾಡುತ್ತಿರುವ ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಇದಾಗಿದ್ದು, ಆರಂಭಿಕ ಹಂತದಲ್ಲಿ ಲಸಿಕೆ ನೀಡುವ ಮೂಲಕ ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಈ ಲಸಿಕಾ ಅಭಿಯಾನದ ಯಶಸ್ಸಿಗೆ ಶಿಕ್ಷಣ ಇಲಾಖೆಯ ಸಹಕಾರ ಅತಿ ಮುಖ್ಯವಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ಪೋಷಕರಿಗೆ ಲಸಿಕೆಯ ಮಹತ್ವದ ಕುರಿತು ಮಾಹಿತಿ ನೀಡಬೇಕು. ಅಲ್ಲದೆ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಧ್ವನಿವರ್ಧಕ ಬಳಸಿ ವ್ಯಾಪಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಹೆಚ್.ಪಿ.ವಿ. ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಹೆಣ್ಣುಮಕ್ಕಳಿಗೆ ಈ ಲಸಿಕೆ ಕೊಡಿಸುವ ಮೂಲಕ ಅವರ ಭವಿಷ್ಯದ ಆರೋಗ್ಯವನ್ನು ರಕ್ಷಿಸಬೇಕು.

ಈ ಸುದ್ದಿ ಓದಿದ್ದೀರಾ? ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಜಿಲ್ಲೆಯಲ್ಲಿ ಈಗಾಗಲೇ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಪೂರಕ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ಕಂದಾಯ, ಶಿಕ್ಷಣ, ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು.

ಒಬ್ಬೇ ಒಬ್ಬ ಅರ್ಹ ಮಗು ಕೂಡ ಲಸಿಕೆಯಿಂದ ವಂಚಿತರಾಗಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಇದೇ ವೇಳೆ ಜಿಲ್ಲೆಯಲ್ಲಿ ದಡಾರ ಮತ್ತು ರೂಬೆಲ್ಲಾ ನಿಯಂತ್ರಣಕ್ಕೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ತಿಳಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ನಟರಾಜ್ ಸೇರಿದಂತೆ ವಿವಿಧ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ನ್ಯೂಜಿಲೆಂಡ್ ಟಿ20 ಸರಣಿ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಗುರುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಐದು...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ ಈ ತಪ್ಪು ಮಾಡಬೇಡಿ!

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...