ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

Date:

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

- Advertisement -

ತರಬೇತಿಯನ್ನು ಕಾರವಾರ ತಾಲೂಕಿನ ಮಾಜಾಳಿ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಅಕ್ಟೋಬರ್ 3 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1 ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷಗಳ ಒಳಗಿರಬೇಕು. ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರಬೇಕು.
ಜನ್ಮ ದಿನಾಂಕ ಮತ್ತು ವಯಸ್ಸು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 3 ಅಕ್ಟೋಬರ್ 2025 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು ಅಕ್ಟೋಬರ್ 3 2005 ರಿಂದ 3 ಅಕ್ಟೋಬರ್ 2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.‌

ಇದನ್ನೂ ಓದಿ: ಉತ್ತರ ಕನ್ನಡ | ‘ಗ್ರಾಮ ಒನ್’ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

ಅರ್ಜಿ ನಮೂನೆಯನ್ನು ಜಿಲ್ಲಾ /ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :08382-226588 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...