ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ ತಾಲೂಕಿನ ಮಾವಿನಕುರ್ವೆ ಅಂಚೆ ವ್ಯಾಪ್ತಿಯ ಕರಿಕಲ್ ಗ್ರಾಮದ ಗಣೇಶ ಮೊಗೇರ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಶಿವಮೊಗ್ಗ ಅವರು ಅಕ್ಟೋಬರ್ 30ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

- Advertisement -

ಗಣೇಶ ಮೊಗೇರ ಅವರು ಈ ಹಿಂದೆ ಜೈ ಭೀಮ್ ಸಂಘಟನೆ ಹಾಗೂ ಮೀನುಗಾರರ ಸಂಘದಲ್ಲಿ ಹಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಜಿಲ್ಲೆಯ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿರುವ ಅವರು, ಮೊಗೇರ ಸಮುದಾಯದ ಅಭಿವೃದ್ಧಿ ಹಾಗೂ ಮೀನುಗಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಪಾಲ್ಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕರಾವಳಿ ಭಾಗದಲ್ಲಿ ದಲಿತಪರ ಸಂಘಟನೆಗಳು ನಿರೀಕ್ಷಿತ ಮಟ್ಟದಲ್ಲಿ ಪ್ರಭಾವ ಹೊಂದಿಲ್ಲ. ಆದರೆ, ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಲ್ಲಿ ದಲಿತ ಸಂಘಟನೆಗಳು ಹೆಚ್ಚು ಸಂಘಟಿತವಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ ಮೊಗೇರ ಅವರಿಗೆ ಜಿಲ್ಲಾ ಮಟ್ಟದ ಜವಾಬ್ದಾರಿ ನೀಡಿರುವುದು ಕರಾವಳಿ ಭಾಗದಲ್ಲಿಯೂ ಸಂಘಟನೆಯನ್ನು ಬಲಪಡಿಸಲು ಸಹಕಾರಿಯಾಗಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಅವರ ನೇಮಕಾತಿಯಿಂದ ಜಿಲ್ಲೆಯ ಕರಾವಳಿ ಭಾಗದ ತಾಲೂಕುಗಳಲ್ಲಿಯೂ ದಲಿತ ಸಂಘಟನೆಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ. ಮೊಗೇರ ಸಮುದಾಯ ಸೇರಿದಂತೆ ವಿವಿಧ ದಲಿತ ಸಮುದಾಯಗಳ ಸಮಸ್ಯೆಗಳಿಗೆ ಸಂಘಟನೆಯ ಮೂಲಕ ಧ್ವನಿಯಾಗಲು ಹಾಗೂ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಲು ಹೊಸ ಜವಾಬ್ದಾರಿ ನೆರವಾಗಬಹುದು ಎಂದು ದಲಿತ ಮುಖಂಡರು ಹಾಗೂ ಅಂಬೇಡ್ಕರ್‌ವಾದಿಗಳು ಅಭಿಪ್ರಾಯಪಟ್ಟಿದ್ದಾರೆ.

ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿ, ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಗಣೇಶ ಮೊಗೇರ ಅವರಿಗೆ ವಹಿಸಲಾಗಿದೆ. ಈ ನೇಮಕಾತಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...