ಉತ್ತರ ಕನ್ನಡ | ಮುಂಡಗೋಡ–ಹಳಿಯಾಳ ಗ್ರಾಮಗಳ ಜನತೆಗೆ ಸುವರ್ಣಾವಕಾಶ: ಮೀನು ಮಾರಾಟ ವಾಹನಕ್ಕೆ ಸಿಗಲಿದೆ 90% ಸಬ್ಸಿಡಿ!

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಹಳಿಯಾಳ ತಾಲೂಕಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ‘ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ’ದ ಮೂಲಕ 2025-26ನೇ ಸಾಲಿನಲ್ಲಿ ಬುಡಕಟ್ಟು ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೀನುಗಾರಿಕೆ ಇಲಾಖೆಯು ವ್ಯಾಪಾರದ  ಉತ್ತೇಜನಕ್ಕೆ ಸಬ್ಸಿಡಿ ನೀಡುತ್ತಿದೆ.

- Advertisement -

ಈ ಯೋಜನೆಯಡಿ ಮೀನು ಮಾರಾಟಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಬುಡಕಟ್ಟು ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಮೀನು ಮಾರಾಟ ಮಾಡಲು ಐಸ್ ಬಾಕ್ಸ್ ಹೊಂದಿರುವ ದ್ವಿಚಕ್ರ ವಾಹನ, ಐಸ್ ಬಾಕ್ಸ್ ಹೊಂದಿರುವ ತ್ರಿಚಕ್ರ ವಾಹನಗಳ ಖರೀದಿ ಹಾಗೂ ಜೀವಂತ ಮೀನು ಮಾರಾಟ ಕೇಂದ್ರಗಳನ್ನು (Live Fish Vending Centres) ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಗೃಹರಕ್ಷಕದಳದಲ್ಲಿ 89 ಸ್ವಯಂಸೇವಕರ ನೇಮಕಾತಿ: ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ

ವಿಶೇಷವೆಂದರೆ, ಈ ಘಟಕಗಳ ಒಟ್ಟು ವೆಚ್ಚದಲ್ಲಿ ಸರ್ಕಾರವು ಶೇಕಡಾ 90 ರಷ್ಟು ಬೃಹತ್ ಮೊತ್ತದ ಸಹಾಯಧನವನ್ನು ನೀಡಲಿದೆ.

ಯಾವ ಗ್ರಾಮದವರಿಗೆ ಅವಕಾಶ? ಈ ಯೋಜನೆಯು ಆಯ್ದ ಗ್ರಾಮಗಳಿಗೆ ಮಾತ್ರ ಸೀಮಿತವಾಗಿದ್ದು, ಹಳಿಯಾಳ ತಾಲ್ಲೂಕಿನ ಗರುಡೊಳ್ಳಿ ಗ್ರಾಮದವರು ಅರ್ಜಿ ಸಲ್ಲಿಸಬಹುದು. ಜೋಯಿಡಾ ತಾಲ್ಲೂಕಿನ ಜೋಯಿಡಾ, ಅವೇಡ, ರಾಮನಗರ ಮತ್ತು ಪ್ರಧಾನಿ ಗ್ರಾಮಸ್ಥರಿಗೆ ಅವಕಾಶವಿದೆ.

ಮುಂಡಗೋಡ ತಾಲ್ಲೂಕಿನ ಯರೇಬೈಲ್, ಹುಲಿಹೊಂಡ, ಅಗಡಿ, ನಂದಿಕಟ್ಟ, ಉಗ್ಗಿನಕೇರಿ, ಗುಂಜಾವತಿ, ಮೈನಳ್ಳಿ, ಇಂದೂರು, ಹುನಗುಂದ, ಚೌಡಳ್ಳಿ, ನ್ಯಾಸರ್ಗಿ, ಸಾಲಗಾಂವ, ಚಿಗಳ್ಳಿ, ಕಾತೂರ, ಓರಲಗಿ, ರಾಮಾಪುರ, ಕೋಡಂಬಿ, ಭದ್ರಾಪುರ, ಪಾಳಾ, ಸಿದ್ದಾಪುರ, ಮಳಗಿ, ಗೊಟಗೋಡಿಕೊಪ್ಪ ಹಾಗೂ ಕ್ಯಾದಗಿಕೊಪ್ಪ ಗ್ರಾಮಗಳ ನಿವಾಸಿಗಳು ಮಾತ್ರ ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ.

ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 16, 2026 ಕೊನೆಯ ದಿನವಾಗಿದೆ. ಹೆಚ್ಚಿನ ತಾಂತ್ರಿಕ ಮಾಹಿತಿ ಅಥವಾ ಅರ್ಜಿ ಸಲ್ಲಿಕೆಯ ವಿವರಗಳಿಗಾಗಿ ಹಳಿಯಾಳ ಮತ್ತು ಮುಂಡಗೋಡ ಕಚೇರಿಯ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ನೇರವಾಗಿ ಸಂಪರ್ಕಿಸಬೇಕೆಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...