ಉತ್ತರ ಕನ್ನಡ | ಸೇನೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ: ಭಾರತೀಯ ಸೇನೆ ಹಾಗೂ ಇತರ ಸಮವಸ್ತ್ರಧಾರಿ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ.

- Advertisement -

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲ ತಂಡದ ಆಯ್ಕೆಯ ಪೂರ್ವ ಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತ ಬಾಲಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ತರಬೇತಿಯು ಕಾರವಾರದ “ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ”ಯಲ್ಲಿ ನಡೆಯಲಿದ್ದು, ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗುಂಪಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೇ 28, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹತೆಯ ಮಾನದಂಡಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1ಕ್ಕೆ 2.50 ಲಕ್ಷ ರೂಪಾಯಿಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ 1 ಲಕ್ಷ ರೂಪಾಯಿಗಳ ಮಿತಿಯೊಳಗಿರಬೇಕು.

ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಹಾಗೂ ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರುವುದು ಕಡ್ಡಾಯವಾಗಿದೆ. ಗ್ರೇಡಿಂಗ್ ಪದ್ಧತಿಯಡಿ ವ್ಯಾಸಂಗ ಮಾಡಿದವರು ಸಹ ಇದಕ್ಕೆ ಸಮಾನವಾದ ಅಂಕಗಳನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 17 ರಿಂದ 20 ವರ್ಷದೊಳಗಿರಬೇಕು. ಅಂದರೆ, ಅಭ್ಯರ್ಥಿಯು 28-05-2006 ರಿಂದ 28-05-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ವಯಸ್ಸಿನ ಲೆಕ್ಕಾಚಾರಕ್ಕೆ 10ನೇ ತರಗತಿಯ ಅಂಕಪಟ್ಟಿಯಲ್ಲಿರುವ ಜನ್ಮ ದಿನಾಂಕವನ್ನೇ ಪರಿಗಣಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಾನವ ಹಕ್ಕುಗಳ ರಕ್ಷಣೆ ಅಧಿಕಾರಿಗಳ ಹೊಣೆ: ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್

ಆಸಕ್ತರು ತಮ್ಮ ಜಿಲ್ಲೆಯ ಅಥವಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 28ರ ಒಳಗಾಗಿ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ನೆಲಮಹಡಿಯಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ತಲುಪಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08382-226588 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...