ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ FTK -ನೀರಿನ ಗುಣಮಟ್ಟ, VWSC & O&M policy adoption ಕುರಿತು ವರದಿಗಳನ್ನು ಪರಿಶೀಲಿಸಿದರು.

- Advertisement -

ಭಟ್ಕಳ ತಾಲೂಕಿನ ಶಿರಾಲಿ ಎಮ್ ವಿ ಎಸ್ ಕಾಮಗಾರಿಯ ಜಾಕವೇಲ್ ಸ್ಥಳ ಪರಿವೀಕ್ಷಣೆ ಮಾಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲು ಸೂಚಿಸಿದರು. ಬಳಿಕ ಮಾತನಾಡಿದ ಅವರು, “ಈ ಯೋಜನೆಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಇತ್ತೀಚೆಗೆ ಅತಿ ಹೆಚ್ಚು ಮಳೆ ಆಗುತ್ತಿರುವುದರಿಂದ ನೀರಿನ ಮೂಲಗಳನ್ನು ಸ್ವಚ್ಚವಾಗಿ ಮತ್ತು ಕಲುಷಿತವಾಗದಂತೆ ಎಚ್ಚರ ವಹಿಸಿ. ಸಾರ್ವಜನಿಕರಿಗೆ ಮಳೆಗಾಲದಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಈ ಸಂದರ್ಭದಲ್ಲಿ ಹೊನ್ನಾವರ ಮತ್ತು ಭಟ್ಕಳ ತಾಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ತಾ ಪಂ ವ್ಯವಸ್ಥಾಪಕರು, ಆರ್ ಡಬ್ಲ್ಯೂ ಎಸ್ ವಿಭಾಗ ಕಚೇರಿಯ ಸಹಾಯಕ ಇಂಜಿನಿಯರ್‌ಗಳು, ಜೆಜೆಎಮ್ ಡಿಪಿಎಂ, ವಿವಿಧ ಗ್ರಾ.ಪಂ ನ ಗ್ರಾಮ ಪಂಚಾಯತಿ ಪಿಡಿಒ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಗುತ್ತಿಗೆದಾರರು, ನೀರುಗಂಟಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...