ಉತ್ತರ ಕನ್ನಡ | ಪೌರಕಾರ್ಮಿಕರಿಗೆ ಶೀಘ್ರವೇ ‘ಗೃಹಭಾಗ್ಯ’: ಮನೆ ಒದಗಿಸಲು ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿರ್ದೇಶನ

Date:

ಉತ್ತರ ಕನ್ನಡ: ಜಿಲ್ಲೆಯ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ಸಲ್ಲದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ‘ಗೃಹಭಾಗ್ಯ’ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಕೂಡಲೇ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹೆಚ್ಚಿನ ಗಮನ ಹರಿಸುವಂತೆ ಅವರು ನಿರ್ದೇಶನ ನೀಡಿದರು. ಮನೆಗಳ ನಿರ್ಮಾಣಕ್ಕೆ ಜಾಗದ ಕೊರತೆಯಿದ್ದರೆ ಕೂಡಲೇ ಆಯಾ ತಾಲೂಕಿನ ತಹಸೀಲ್ದಾರ್‌ಗಳನ್ನು ಸಂಪರ್ಕಿಸಿ ಕಂದಾಯ ಭೂಮಿ ಪಡೆದುಕೊಳ್ಳಬೇಕು. ಒಂದು ವೇಳೆ ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಪರ್ಯಾಯ ನಿವೇಶನಗಳನ್ನು ಗುರುತಿಸಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಮನುಷ್ಯರಿಂದ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ‘ಸಕ್ಕಿಂಗ್ ಮತ್ತು ಜೆಟ್ಟಿಂಗ್’ ಯಂತ್ರಗಳನ್ನು ಬಳಸಬೇಕು. ಕಾರ್ಮಿಕರ ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯವಾಗಿ ಸುರಕ್ಷಾ ಪರಿಕರಗಳನ್ನು ಒದಗಿಸಬೇಕು ಮತ್ತು ಅವುಗಳ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು.

ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನದಂದೇ ವೇತನ ಪಾವತಿಯಾಗಬೇಕು ಹಾಗೂ ಇ.ಎಸ್.ಐ ಮತ್ತು ಇ.ಪಿ.ಎಫ್ ಕಡಿತದ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು. ಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸಿ ನಿಗದಿತ ಸಮಯದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕಪ್‌ಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಪ್ರತಿದಿನ ಉತ್ತಮ ಗುಣಮಟ್ಟದ ಪೌಷ್ಟಿಕಾಂಶವುಳ್ಳ ಉಪಹಾರ, ವಿಶ್ರಾಂತಿ ಗೃಹಗಳ ವ್ಯವಸ್ಥೆ ಹಾಗೂ ಸಂಕಷ್ಟ ಭತ್ಯೆಗಳನ್ನು ವಿತರಿಸುವ ಮೂಲಕ ಪೌರಕಾರ್ಮಿಕರ ಯೋಗಕ್ಷೇಮವನ್ನು ಕಾಪಾಡುವುದು ಆಯಾ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...