ಉತ್ತರ ಕನ್ನಡ | ಹಳಿಯಾಳ ಪೊಲೀಸರ ಭರ್ಜರಿ ಬೇಟೆ: ಅಂತಾರಾಜ್ಯ ದರೋಡೆಕೋರರ ಬಂಧನ

Date:

Advertisements

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಂದು ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹಳಿಯಾಳ ಪೊಲೀಸರು, ಮಹಾರಾಷ್ಟ್ರದ ಕುಖ್ಯಾತ ಅಂತಾರಾಜ್ಯ ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7.95 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ₹4 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಾಪುರ ವ್ಯಾಪ್ತಿಗೆ ಸೇರಿದ ಕುಖ್ಯಾತ ಕಳ್ಳರಾದ ಲಖನ ಅಶೋಕ ಕುಲಕರ್ಣಿ(31), ಸಂದೀಪ ದಿಲೀಪ ಲವಟೆ(25), ವಿವೇಕ ಶಿವಪ್ಪ ಕುಂಬಾರ(26) ಮತ್ತು ಅಜೀಜ್ ಅಲಿಯಾಸ್ ಚೋಟೆ ದಾದಾಪೀರ ಮನಗುಳಿ(28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.

ಪೊಲೀಸ್ ವಿಚಾರಣೆ ವೇಳೆ, ಈ ಕಳ್ಳರ ತಂಡ ಯಲ್ಲಾಪುರ ಮತ್ತು ಕುಂದಾಪುರದಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲೂ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದೆ. ಈ ಆರೋಪಿಗಳ ಮೇಲೆ ಈಗಾಗಲೇ 32ಕ್ಕೂ ಹೆಚ್ಚು ಕಳ್ಳತನ, ಸುಲಿಗೆ, ದರೋಡೆ ಮತ್ತು ಹಲ್ಲೆ ಪ್ರಕರಣಗಳು ವಿವಿಧ ರಾಜ್ಯಗಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಇವುಗಳಲ್ಲಿ ಮೂರು ಪ್ರಕರಣಗಳಲ್ಲಿ ಇವರಿಗೆ ಶಿಕ್ಷೆಯೂ ಆಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಹಾಂತ ಶಿವಯೋಗಿಗಳ ಕಾರ್ಯಕ್ರಮ; ಮದ್ಯ, ಮಾದಕ ವ್ಯಸನಮುಕ್ತ ಸಮಾಜಕ್ಕೆ ಕರೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಹೆಚ್ಚುವರಿ ಅಧೀಕ್ಷಕ ಜಗದೀಶ ನಾಯ್ಕ ಮತ್ತು ಇತರೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಳಿಯಾಳ ಪಿಎಸ್‌ಐಗಳಾದ ಬಸವರಾಜ ಮಬನೂರ ಮತ್ತು ಕೃಷ್ಣ ಅರಕೇರಿ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಗಣಪತಿ, ಶ್ರೀಶೈಲ್ ಜಿ ಎಂ, ವಿನೋದ ಜಿ ಬಿ, ಲಕ್ಷ್ಮಣ ಪೂಜಾರಿ, ಅರವಿಂದ ಭಜಂತ್ರಿ, ಮಂಜುನಾಥ ಬಾಲಿ, ಆಯಾಜ್ ಯಾದವಾಡ, ಕಾಶಿನಾಥ ಬಿಳ್ಳೂರ, ವಿನಾಯಕ ನಾಯ್ಕ, ಯೋಗೇಶ ಗೌಡಾ ಹಾಗೂ ದಾಂಡೇಲಿ ಠಾಣೆಯ ಸಿಬ್ಬಂದಿಗಳಾದ ಕೃಷ್ಣ ಬೆಳ್ಳಿವರಿ, ಉದಯ ಗುನಗಾ, ಉಮೇಶ ತೇಲಿ ಭಾಗವಹಿಸಿದ್ದರು.

ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X