ಉತ್ತರ ಕನ್ನಡ | ಹೆಚ್ಚಲಿದೆ ಬಿಸಿಲ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಹೈ-ಅಲರ್ಟ್ ಹಾಗೂ ಮುನ್ನೆಚ್ಚರಿಕೆ

Date:

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 37.8 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪುವ ಸಾಧ್ಯತೆಯಿದ್ದು, ಸಾಮಾನ್ಯಕ್ಕಿಂತ ಸುಮಾರು 3 ರಿಂದ 4 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣತೆ ಕಂಡುಬರಲಿದೆ.

- Advertisement -

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೆಲವು ಪ್ರಮುಖ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೆಚ್ಚುತ್ತಿರುವ ಉಷ್ಣಾಂಶದಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಾರ್ವಜನಿಕರು ದಿನವಿಡೀ ಸಾಕಷ್ಟು ನೀರು ಕುಡಿಯಬೇಕು ಹಾಗೂ ಬಾಯಾರಿಕೆಯಾಗದಿದ್ದರೂ ನಿಯಮಿತವಾಗಿ ನೀರು ಸೇವಿಸುವುದು ಅಗತ್ಯವಾಗಿದೆ. ಓ.ಆರ್.ಎಸ್ (ORS), ಲಿಂಬೆ ಹಣ್ಣಿನ ರಸ, ಮಜ್ಜಿಗೆ ಹಾಗೂ ಎಳನೀರಿನಂತಹ ಪಾನೀಯಗಳ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು.

1000522207

ಬಿಸಿಲಿನಲ್ಲಿ ಹೊರಹೋಗುವಾಗ ಹಗುರವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸುವುದು ಮತ್ತು ತಲೆ ಹಾಗೂ ಮುಖವನ್ನು ರಕ್ಷಿಸಿಕೊಳ್ಳಲು ಟೋಪಿ ಅಥವಾ ಛತ್ರಿಯನ್ನು ಬಳಸುವಂತೆ ಸಲಹೆ ನೀಡಲಾಗಿದೆ. ಮುಖ್ಯವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತೀವ್ರ ಬಿಸಿಲಿರುವುದರಿಂದ, ಈ ಅವಧಿಯಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.

ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಒಂದು ವೇಳೆ ತಲೆಸುತ್ತು, ಅತಿಯಾದ ದೌರ್ಬಲ್ಯ, ವಾಂತಿ ಅಥವಾ ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಮದ್ಯಪಾನ, ಅತಿಯಾದ ಕಾಫಿ ಅಥವಾ ಟೀ ಹಾಗೂ ಸಕ್ಕರೆ ಅಂಶ ಹೆಚ್ಚಿರುವ ಪಾನೀಯಗಳಿಂದ ದೂರವಿರಬೇಕು.

ಬಿಸಿಲಿನಲ್ಲಿ ನಿಲ್ಲಿಸಿರುವ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಟ್ಟು ಹೋಗಬಾರದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಯಾವುದೇ ತುರ್ತು ಸಂದರ್ಭದಲ್ಲಿ ನೆರವು ಪಡೆಯಲು ಸಾರ್ವಜನಿಕರು ಜಿಲ್ಲಾ ನಿಯಂತ್ರಣ ಕೊಠಡಿಯ ಟೋಲ್ ಫ್ರೀ ಸಂಖ್ಯೆ 1077 ಅಥವಾ ವಾಟ್ಸಾಪ್ ಸಂಖ್ಯೆ 9483511015 ಕ್ಕೆ ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...