ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ(IMD) ಇಂದು ಬೆಳಿಗ್ಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಬಿದ್ದಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರೀ-ಪ್ರೈಮರಿ, ಪ್ರಾಥಮಿಕ–ಮಾಧ್ಯಮಿಕ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆಗಸ್ಟ್ 17ರಿಂದ 19ರವರೆಗೆ ಹೆಚ್ಚಿನ ಮಳೆಯ ಮುನ್ಸೂಚನೆ ಇರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅವಶ್ಯಕ ಸೇವೆಗಳು: ಆರೋಗ್ಯ, ತುರ್ತು ಸೇವೆಗಳು, ಪೊಲೀಸ್, ವಿದ್ಯುತ್, ನೀರು, ರಸ್ತೆ–ಸಾರಿಗೆ ನಿರ್ವಹಣೆ ಮುಂತಾದ ಅವಶ್ಯಕ ಸೇವೆಗಳು ಎಂದಿನಂತೆ ಮುಂದುವರೆಯುತ್ತವೆ.
ಈ ಸುದ್ದಿ ಓದಿದ್ದೀರಾ? ಭಾರೀ ಮಳೆ | ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ಐಎಂಡಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಎಚ್ಚರಿಕೆಯಂತೆ ಆಗಸ್ಟ್ 17ರಿಂದ 19ರ ನಡುವಿನ ಅವಧಿಯಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತ, ಪ್ರವಾಹ, ಸೇತುವೆ/ಕೋಸ್-ಕಾಸ್ವೇಗಳ ಮೇಲೆ ನೀರಿನ ಹರಿವು ಹೆಚ್ಚಳ ಸೇರಿದಂತೆ ಮೊದಲಾದ ಅಪಾಯಗಳನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.