ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 24ರಂದು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 24 (ಶುಕ್ರವಾರ)ರಂದು ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಪರ್ಷಿಯನ್ ಬೋಟ್ ಬೆಂಕಿಗಾಹುತಿ: ರೂ. 30 ಲಕ್ಷಕ್ಕೂ ಅಧಿಕ ನಷ್ಟ
ಜುಲೈ 24ರಂದು ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಈ ರಜೆ ಅನ್ವಯವಾಗಲಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಲ್ಲದೆ, ಈ ರಜೆಯಿಂದ ಉಂಟಾಗುವ ಪಾಠದ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.






