ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

Date:

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಗುಡ್ಡ ಕುಸಿದಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

- Advertisement -

ಶಿರೂರಿನ ಬಳಿ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡವನ್ನು ಅಗೆಯಲಾಗಿತ್ತು. ಗುಡ್ಡದ ಉಳಿದ ಭಾಗ ಸಡಿಲಗೊಂಡಿದ್ದರಿಂದ, ಭಾರೀ ಮಳೆಗೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು,  11 ಜನ ನಾಪತ್ತೆಯಾಗಿದ್ದಾರೆ. ಹಲವಾರು ವಾಹನಗಳು ಗಂಗಾವಳಿ ನದಿಗೆ ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತರನ್ನು ಹೆದ್ದಾರಿ ಪಕ್ಕದಲ್ಲಿ ಚಹಾ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ (47), ಅವರ ಪತ್ನಿ ಶಾಂತಿ (36), ಮಗ ರೋಶನ್ (11), ಪುತ್ರಿ ಅವಂತಿಕಾ (6), ಸಂಬಂಧಿ ಉಪೇಂದ್ರ (50) ಎಂದು ಗುರುತಿಸಲಾಗಿದೆ.

ಹಲವರು ಗುಡ್ಡ ಕುಸಿದ ಮಣ್ಣಿನಲ್ಲಿ ಸಿಲುಕಿದ್ದು, ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್‌ಡಿಆರ್‌ಎಫ್) ತಂಡವು ರಕ್ಷಿಸಿದೆ. ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವುಗೊಳಿಸಲು 12ಕ್ಕೂ ಹೆಚ್ಚು ಜೆಸಿಬಿ ಕಾರ್ಯಾಚರಣೆ ನಡೆಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...