ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿದ್ದ ವ್ಯಕ್ತಿ ನೀಡಿದ ಕಿರುಕುಳದಿಂದ ಬೇಸತ್ತ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿ, 24 ವರ್ಷದ ನೇತ್ರಾ ಗೋವಾಲಿ ಆತ್ಮಹತ್ಯೆಗೆ ಶರಣಾದ ಯುವತಿ.
ಯುವತಿಯ ತಂದೆ ಆಕೆಯ ಇನ್‌ಸ್ಟಾಗ್ರಾಮ್ ಸ್ನೇಹಿತ ಗೋವರ್ಧನ ಮೊಗೇರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಸ್ನೇಹಿತನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಯುವತಿಗೆ ಆರೋಪಿ ಒಂದು ವರ್ಷದಿಂದ ಪರಿಚಿತನಾಗಿದ್ದಾನೆ. ಅಲ್ಲದೆ, ಇತ್ತೀಚೆಗೆ ತನ್ನನ್ನು ಪ್ರೀತಿಸುವಂತೆ ಆತ ನಿರಂತರವಾಗಿ ಒತ್ತಾಯಿಸುತ್ತಿದ್ದನ್ನು ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿದಾಗಿ, ಆಕೆಗೆ ಆತ ಖರ್ಚು ಮಾಡಿದ್ದ ಎಲ್ಲ ಹಣವನ್ನು ವಾಪಸ್ ಕೊಡುವಂತೆ ಪೀಡಿಸುತ್ತಿದ್ದನು. ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಕೂಡ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಆತನ ಕಿರುಕುಳ ಸಹಿಸಲಾರದೆ ಬುಧವಾರ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.