ಉತ್ತರ ಕನ್ನಡ | ಕರಾವಳಿ ಉತ್ಸವ 2025: ಶಂಕರ್ ಮಹಾದೇವನ್, ಸೋನು ನಿಗಂ ಸೇರಿ ದಿಗ್ಗಜ ಕಲಾವಿದರ ಆಗಮನ

Date:

ಉತ್ತರ ಕನ್ನಡ: ಕಾರವಾರ ರವೀಂದ್ರನಾಥ ಠಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಡಿ. 22 ರಿಂದ 28 ರವರೆಗೆ ನಡೆಯಲಿರುವ ಪ್ರತಿಷ್ಠಿತ ಕರಾವಳಿ ಉತ್ಸವ-2025 ನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ಸಿಗೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಎಲ್ಲ ಸಮಿತಿಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಉತ್ಸವಕ್ಕೆ ಅಗತ್ಯವಿರುವ ಅನುದಾನದ ಕುರಿತು ಮಾಹಿತಿ ನೀಡಿದ ಸಚಿವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ. 1 ಕೋಟಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೂ. 5 ಕೋಟಿ ಅನುದಾನ ಬಿಡುಗಡೆಯಾಗಲಿದ್ದು, ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಂತ್ರಿಗಳು ತಾಕೀತು ಮಾಡಿದರು.

ಆಮಂತ್ರಣ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಅಂತಿಮಗೊಳಿಸಿ ಕೂಡಲೇ ಮುದ್ರಣ ಮಾಡುವಂತೆ ತಿಳಿಸಿದ ಸಚಿವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ತಾನೇ ಖುದ್ದು ಆಹ್ವಾನ ನೀಡಲಿದ್ದೇನೆ ಎಂದರು. ಜೊತೆಗೆ, ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೂ ಆಮಂತ್ರಣ ಪತ್ರಿಕೆ ನೀಡಲು ಕ್ರಮವಹಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ ಮತ್ತು ಅಧಿಕಾರಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಉತ್ಸವದಲ್ಲಿ ಭಾಗವಹಿಸುವ ಕಲಾವಿದರ ಕುರಿತು ಮಾಹಿತಿ ನೀಡಿದರು. ಇವೆಂಟ್ ಮ್ಯಾನೇಜ್‌ಮೆಂಟ್ ತಂಡವು ಅಂತಿಮಗೊಳಿಸಿರುವ ಪಟ್ಟಿಯಂತೆ, ಡಿ. 22 ರಂದು ಶಂಕರ್ ಮಹಾದೇವನ್, ಡಿ. 23 ರಂದು ಮೀಕಾ ಸಿಂಗ್, ಡಿ. 24 ರಂದು ಸೋನು ನಿಗಮ್, ಡಿ. 25 ರಂದು ರಫ್ತಾರ್, ಡಿ. 27 ರಂದು ಮಹಮ್ಮದ್ ದಾನೀಶ್ ಹಾಗೂ ಡಿ. 28 ರಂದು ದಲೇರಿ ಮೆಹಂದಿ ತಂಡದವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.

ಡಿ. 26 ರ ಕಾರ್ಯಕ್ರಮಕ್ಕೆ ಕಲಾವಿದರನ್ನು ಅಂತಿಮಗೊಳಿಸಬೇಕಿದೆ ಎಂದರು. ಇನ್ನು, ಸ್ಥಳೀಯ ಕಲಾವಿದರಿಗೂ ಪ್ರತಿದಿನ ಸಂಜೆ 5.30 ರಿಂದ 7.30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುತ್ತಿರುವ ಎಲ್ಲರಿಗೂ ವೇದಿಕೆಯಲ್ಲಿ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಸ್ಪರ್ಧೆಗಳು ಮತ್ತು ಚಟುವಟಿಕೆಗಳ ಕುರಿತು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಮಾಹಿತಿ ನೀಡಿದರು. ಡಿ. 22 ರಂದು ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುವ ಗಣ್ಯರನ್ನು ಸ್ವಾಗತಿಸಲು ಜಿಲ್ಲಾ ಮತ್ತು ರಾಜ್ಯ ಮಟ್ಟದ 15 ರಿಂದ 20 ಕಲಾ ತಂಡಗಳ ಮೆರವಣಿಗೆ, ಹಾಗೂ ಮೀನುಗಾರರ ದೀಪ ಮೆರವಣಿಗೆ ನಡೆಯಲಿದೆ.

ಡಿ. 23 ರಂದು ಛಾಯಾಗ್ರಹಣ ಮತ್ತು ರೀಲ್ಸ್ ಸ್ಪರ್ಧೆ ಆಯೋಜಿಸಲಾಗಿದ್ದು, ಆಯ್ಕೆಯಾದ ಛಾಯಾಚಿತ್ರ ಮತ್ತು ರೀಲ್ಸ್‌ಗಳನ್ನು ಅಂತಿಮ ದಿನದವರೆಗೆ ಪ್ರದರ್ಶಿಸಲಾಗುವುದು. ಇನ್ನು, ಡಿ. 24 ರಂದು ರಂಗೋಲಿ ಮತ್ತು ಅಡುಗೆ ಸ್ಪರ್ಧೆ, ಡಿ. 25 ರಂದು 3, 5 ಮತ್ತು 10 ಕಿ.ಮೀ ವಿಭಾಗಗಳಲ್ಲಿ ಮ್ಯಾರಥಾನ್ ಮತ್ತು ಕರಾವಳಿ ರನ್ ಸ್ಪರ್ಧೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ತೋಟದಲ್ಲಿ ವಿಷದ ಹಾವು ಕಚ್ಚಿ 39 ವರ್ಷದ ಮಹಿಳೆ ಸಾವು

ಡಿ. 26 ರಂದು ಹಗ್ಗ ಜಗ್ಗಾಟ, ಮಕ್ಕಳ ಚಿತ್ರಕಲಾ ಸ್ಪರ್ಧೆ ಹಾಗೂ ಗೋಡೆಗಳ ಮೇಲೆ ಚಿತ್ರಕಲಾ ಸ್ಪರ್ಧೆ ಮತ್ತು ಡಿ. 27 ರಂದು ಶ್ವಾನ ಪ್ರದರ್ಶನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...