ಅಂಕೋಲಾದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ, ದಾಖಲೆ ಇಲ್ಲದ ₹18 ಲಕ್ಷ ಹಣವನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರವಾರದ ಚೆಕ್‌ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ.
“ಸರಿಯಾದ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣವನ್ನು ಕಾರಾವಾರದ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ತಡೆದು ಪ್ರಶ್ನಿಸಿದಾಗ, ಪ್ರಯಾಣಿಕರು ಯಾವುದೇ ಸಮರ್ಪಕ ಪುರಾವೆ ನೀಡಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ” ಎಂದು ಚೆಕ್‌ಪೋಸ್ಟ್‌ನಲ್ಲಿರುವ ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.